ಮಹಾಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚಾಲನೆ 
ರಾಜ್ಯ

ಐತಿಹಾಸಿಕ 88ನೇ ಮಹಾಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿದ್ಯುಕ್ತ ಚಾಲನೆ!

ಜೈನಕಾಶಿ ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಐತಿಹಾಸಿಕ 88ನೇ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ವಿದ್ಯುಕ್ತ ಚಾಲನೆ ನೀಡಿದರು.

ಹಾಸನ: ಜೈನಕಾಶಿ ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಐತಿಹಾಸಿಕ 88ನೇ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ವಿದ್ಯುಕ್ತ ಚಾಲನೆ ನೀಡಿದರು.
ಶ್ರವಣ ಬೆಳಗೊಳದಲ್ಲಿ ನಿರ್ಮಿಸಲಾಗಿರುವ ಚಾವುಂಡರಾಯ ಸಭಾಮಂಟಪದಲ್ಲಿಕ್ಕೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರು, ದೀಪ ಬೆಳಗುವುದರ ಮೂಲಕ ಮಹ ಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ  ವೇಳೆ ಕೋವಿಂದ್ ಅವರ ಪತ್ನಿ ಸರಿತಾ ಅವರು ಕೂಡ ಭಾಗಿಯಾಗಿದ್ದರು. ಇದೇ ವೇಳೆ ರಾಷ್ಟ್ರಪತಿ ಕೋವಿಂದ್ ಅವರು, ಸ್ವರ್ಣ ಗೊಮ್ಮಟ ಪುತ್ತಳಿಯ ತೆರೆ ಸರಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.  ಇನ್ನು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಬಾಯಿ ವಾಲ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಸಚಿವ ಎ.ಮಂಜು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು  ಭಾಗವಹಿಸಿದ್ದಾರೆ.
12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಕಣ್ತುಂಬಿಕೊಳ್ಳಲು ನೂರಕ್ಕೂ ಹೆಚ್ಚು ದಿಂಗಂಬರ ಮುನಿಗಳು, ಆಚಾರ್ಯರು ಮತ್ತು ಮಾತಾಜಿಯವರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕಾಗಿ ಪಂಚಕಲ್ಯಾಣ  ನಗರದಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ಚಾವುಂಡರಾಯ ಸಭಾಮಂಟಪ ನಿರ್ಮಾಣ ಮಾಡಲಾಗಿದ್ದು, ಇಲ್ಲಿ ಒಟ್ಟು 1800 ಆಸನ ವ್ಯವಸ್ಥೆ ಮಾಡಲಾಗಿದೆ.
ಇದಕ್ಕೂ ಮುನ್ನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ದಂಪತಿಯನ್ನು ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ