ಹೈಕೋರ್ಟಿನ(ಸಾಂದರ್ಭಿಕ ಚಿತ್ರ) 
ರಾಜ್ಯ

ಮಾಹಿತಿ ಆಯುಕ್ತರಾಗಿ ಆನರ್ಹರ ಆಯ್ಕೆ : ರಾಜ್ಯಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ ರಾಜ್ಯದ ನಾಲ್ವರು ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಿರುವವರು ಅನರ್ಹರಾಗಿದ್ದು, ಈ ಸಂಬಂಧ ಪ್ರತಿಕ್ರಿಯಿಸುವಂತೆ ಹೈಕೋರ್ಟ್ ರಾಜ್ಯಸರ್ಕಾರಕ್ಕೆ ಸೂಚನೆ ನೀಡಿದೆ.

ಬೆಂಗಳೂರು: ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ ನೇಮಕಗೊಳಿಸಿರುವ ನಾಲ್ವರು ಮಾಹಿತಿ ಆಯುಕ್ತರ ಅನರ್ಹತೆ  ಸಂಬಂಧ ಪ್ರತಿಕ್ರಿಯಿಸುವಂತೆ ಹೈಕೋರ್ಟ್  ರಾಜ್ಯಸರ್ಕಾರಕ್ಕೆ ಸೂಚನೆ ನೀಡಿದೆ.

 ಹಾವೇರಿ ಜಿಲ್ಲಾಆಸ್ಪತ್ರೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜೆ. ಎಂ. ರಾಜಶೇಖರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ  ನ್ಯಾಯಮೂರ್ತಿಗಳಾದ ಎ. ಎಸ್ , ಬೋಪಣ್ಣ ಅವರಿದ್ದ ಪೀಠ, ಮಾಹಿತಿ ಆಯುಕ್ತರಾಗಿ ಆಯ್ಕೆಯಾಗಿರುವ  ಡಾ. ಕೆ. ಲಿಂಗರಾಜ್. ಡಾ. ಕೆ. ಇ. ಕುಮಾರಸ್ವಾಮಿ, ಎಸ್. ಎಲ್. ಪಾಟೀಲ್ ಮತ್ತು ಹೆಚ್. ಪಿ. ಸುಧಾಮ್ ದಾಸ್ ಅವರಿಗೆ ನೋಟಿಸ್ ನೀಡಿದೆ.

ರಾಜ್ಯ ಮಾಹಿತಿ ಆಯುಕ್ತ ಹುದ್ದೆಗಾಗಿ 170 ಮಂದಿ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿ 21 ಜನರ ಕಿರುಪಟ್ಟಿಯನ್ನು  ತಯಾರಿಸಿದೆ. ಈ ಪೈಕಿ ಅರ್ಜಿದಾರ ರಾಜಶೇಖರ್ ಸೇರಿದಂತೆ ನಾಲ್ವರನ್ನು ಮಾತ್ರ ಅಂತಿಮ ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿದೆ.  ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ ಜನವರಿ 11. 2018ರಂದು ಹೊರಡಿಸಿದ ಆದೇಶದಲ್ಲಿ ನಾಲ್ವರನ್ನು ಮಾತ್ರ ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಕಗೊಳಿಸಿದೆ.

 ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಳ್ಳುವವರು ಕಾನೂನು, ವಿಜ್ಞಾನ ಮತ್ತು ತಂತ್ರಜ್ಞಾನ , ಸಮಾಜ ಸೇವೆ ಸೇರಿದಂತೆ ಆಡಳಿತದ ಬಗ್ಗೆ ಸಮಗ್ರ ಅರಿವು ಹೊಂದಿರಬೇಕಾಗುತ್ತದೆ. ಆದರೆ. ಈಗ ಆಯ್ಕೆಯಾಗಿರುವವರಲ್ಲಿ ಇಬ್ಬರು ರಾಜಕೀಯ ಹಿನ್ನೆಲೆಯವರಾಗಿದ್ದರೆ. ಮತ್ತೊಬ್ಬರು ಡಾಕ್ಟರ್, ಇವುಗಳನ್ನು ಪರಿಗಣಿಸದೆ ಆಯ್ಕೆ ಸಮಿತಿ ನೇಮಕ ಮಾಡಿರುವುದು ಕಾನೂನು ಬಾಹಿರ ಎಂದು ಆರೋಪಿಸಿ ರಾಜಶೇಖರ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ