ಸಂಗ್ರಹ ಚಿತ್ರ 
ರಾಜ್ಯ

ಟೆಕ್ಕಿ ನಾಪತ್ತೆ ಪ್ರಕರಣ: ಎಸ್ಐಟಿ ವರದಿಯಲ್ಲಿ ಹೊಸದೇನಿದೆ- 'ಹೈ' ಪ್ರಶ್ನೆ

ನಾಪತ್ತೆಯಾಗಿರುವ ಸಾಫ್ಟ್'ವೇರ್ ಇಂಜಿನಿಯರ್ ಕುಮಾರ್ ಅಜಿತಾಭ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳ ಕಾರ್ಯಕ್ಕೆ ಹೈಕೋರ್ಟ್ ಗುರುವಾರ ತೀವ್ರವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದೆ...

ಬೆಂಗಳೂರು: ನಾಪತ್ತೆಯಾಗಿರುವ ಸಾಫ್ಟ್'ವೇರ್ ಇಂಜಿನಿಯರ್ ಕುಮಾರ್ ಅಜಿತಾಭ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳ ಕಾರ್ಯಕ್ಕೆ ಹೈಕೋರ್ಟ್ ಗುರುವಾರ ತೀವ್ರವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದೆ. 
ಅಜಿತಾಭ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಟೆಕ್ಕಿ ತಂದೆ ಅಶೋಕ್ ಕುಮಾರ್ ಸಿನ್ಹಾ ಅವರು ಸಲ್ಲಿಸಿದ್ದ ಅರ್ಜಿ ಕುರಿತಂತೆ ನಿನ್ನೆ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ಅವರು, ಎಸ್ಐಟಿ ತನಿಖಾ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸಿದ್ದಾರೆ. 
ಪ್ರಕರಣ ಸಂಬಂಧ ಕೆಲ ದಿನಗಳ ಹಿಂದಷ್ಟೇ ನಗರ ಪೊಲೀಸ್ ಆಯುಕ್ತರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ವರದಿ ಕುರಿತಂತೆ ವಿಚಾರಣೆ ನ್ಯಾಯಾಲಯ ಬೇಸರವನ್ನು ವ್ಯಕ್ತಪಡಿಸಿದ್ದು, ಎಸ್ಐಟಿ ವರದಿಯಲ್ಲಿ ಹೊಸದೇನಿದೆ ಎಂದು ಪ್ರಶ್ನಿಸಿದೆ. 
ಪೊಲೀಸ್ ಆಯುಕ್ತರು ಮತ್ತೆ ಈ ಹಿಂದಿನಂತೆಯೇ ಮಾಡಿದ್ದಾರೆ. ಪ್ರಕರಣವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸುತ್ತಿದ್ದು, ಪ್ರಕರಣವನ್ನು ವೈಯಕ್ತಿಕವಾಗಿ ಪರಿಗಣಿಸಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ಪ್ರಕರಣವನ್ನು ಸಾಮಾನ್ಯ ಪ್ರಕರಣದಂತೆಯೇ ತನಿಖೆ ನಡೆಸುತ್ತಿದ್ದು, ಎಸ್ಐಟಿ ತನಿಖೆ ನಡೆಸುತ್ತಿದೆ ಎಂದೆನಿಸುತ್ತಿಲ್ಲ. ಟೆಕ್ಕಿ ನಾಪತ್ತೆಯಾಗಿ 50 ದಿನಗಳು ಕಳೆದರೂ ಪ್ರಕರಣದ ತನಿಖೆಯಲ್ಲಿ ಯಾವುದೇ ರೀತಿಯ ಪ್ರಗತಿ ಕಂಡು ಬಂದಿಲ್ಲ. ಆರೋಪಿಗಳ ಬಗ್ಗೆ ಎಸ್ಐಟಿಗೆ ಈ ವರೆಗೂ ಯಾವುದೇ ಸುಳಿವುಗಳು ಸಿಕ್ಕಿಲ್ಲ ಎಂದು ಬೇಸರವನ್ನು ವ್ಯಕ್ತಪಡಿಸಿದೆ. 
2017 ಡಿ.17 ರಂದು ಕುಮಾರ್ ಅಜಿತಾಭ್ ಅವರು ನಾಪತ್ತೆಯಾಗಿದ್ದರು, ಬಿಹಾರ ಮೂಲದವರಾಗಿರುವ ಅಜಿತಾಭ್ ಅವರು ಬೆಳ್ಳಂದೂರಿನ ಬ್ರಿಟೀಷ್ ಟೆಲಿಕಾಂನಲ್ಲಿ ಕಳೆದ 5 ವರ್ಷಗಳಿಂಕ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ತಮ್ಮ ಸಿಯಾಜ್ ಕಾರನ್ನು ಮಾರಟ ಮಾಡುವುದಾಗಿ ಒಎಲ್ಎಕ್ಸ್ ನಲ್ಲಿ ಪ್ರಕಟಿಸಿದ್ದರು. ಕಾರನ್ನು ಮಾರಾಟ ಮಾಡುವುದಾಗಿ ಪ್ರಕಟಿಸಿದ ಬಳಿಕ ಅಜಿತಾಭ್ ಕರೆ ಬಂದಾಗಲೆಲ್ಲಾ ಕಾರು ಸಮೇತ ಹೊರ ಹೋಗಿ ಬರುತ್ತಿದ್ದರು. ಡಿ.18 ರಂದೂ ಕೂಡ ಅಜಿತಾಭ್ ಅವರ ಮೊಬೈಲ್'ಗೆ ಕರೆ ಬಂದಿದೆ ಎಂದಿನಂತೆಯೇ ಕಾರಿನಲ್ಲಿ ಹೊರ ಹೋದ ಬಳಿಕ ಮತ್ತೆ ವಾಪಸ್ಸಾಗಿರಲಿಲ್ಲ. ಒಎಲ್ಎಕ್ಸ್ ನಲ್ಲಿ ಜಾಹೀರಾತು ನೋಡಿದ ಬಳಿಕ ಅಜಿತಾಭ್ ಅವರನ್ನು ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆಂದು ಕುಟುಂಬ ಸದಸ್ಯರು ಸಂಶಯ ವ್ಯಕ್ತಪಡಿಸುತ್ತಿದ್ದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT