ಬೆಂಗಳೂರು: ಮಕ್ಕಳಾಗಲಿಲ್ಲವೆಂದು ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಮಕ್ಕಳಾಗಲಿಲ್ಲವೆಂಬ ಕೊರಗಿನಿಂದ 25 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ....
ಬೆಂಗಳೂರು: ಮಕ್ಕಳಾಗಲಿಲ್ಲವೆಂಬ ಕೊರಗಿನಿಂದ 25 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ.
ರವಿತೇಜ ಅವರ ಪತ್ನಿ ರಾಧಿಕಾ ಎಂದು ಮಹಿಳೆಯನ್ನು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಈ ಜೋಡಿ ವಿವಾಹವಾಗಿದ್ದರು. ರವಿತೇಜ ಅವರ ಪೋಷಕರೊಂದಿಗೆ ದಂಪತಿ ವಾಸಿಸುತ್ತಿದ್ದರು. ಇಬ್ಬರೂ ಉದ್ಯೋಗ ಹೊಂದಿರಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಿನ್ನೆ ಮನೆಯಲ್ಲಿ ಒಬ್ಬರೇ ಇರುವಾಗ ರಾಧಿಕಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊರಗೆ ಹೋದವರು ಮನೆಗೆ ಮರಳಿದಾಗ ನಿನ್ನೆ ಅಪರಾಹ್ನ 4 ಗಂಟೆ ಸುಮಾರಿಗೆ ಪ್ರಕರಣ ಬೆಳಕಿಗೆ ಬಂದಿದೆ.
ಮಕ್ಕಳಾಗಲಿಲ್ಲವೆಂಬ ಕೊರಗು ರಾಧಿಕಾಗೆ ಇತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ದಂಪತಿ ನಡುವೆ ಭಿನ್ನಾಭಿಪ್ರಾಯಗಳಿದ್ದವು. ಈ ಎಲ್ಲಾ ಕಾರಣಗಳು ರಾಧಿಕಾ ತನ್ನ ಜೀವನದಲ್ಲಿ ಈ ನಿರ್ಧಾರಕ್ಕೆ ಬರಲು ಕಾರಣವಾಗಿರಬಹುದು ಎಂದು ಅಶೋಕ್ ನಗರ ಪೊಲೀಸರು ತಿಳಿಸಿದ್ದಾರೆ.
ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.