ಮ್ಯಾನ್ ಹೋಲ್ 
ರಾಜ್ಯ

ಬೆಂಗಳೂರಿನಲ್ಲಿ ಮತ್ತೆ ಮ್ಯಾನ್ ಹೋಲ್ ದುರಂತ: ಇಬ್ಬರು ಕಾರ್ಮಿಕರ ಸಾವು

ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ...

ಬೆಂಗಳೂರು: ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. 
ನಗರದ ಎಇಸಿಎಸ್ ಲೇಔಟ್ ನಲ್ಲಿರುವ ವಾಣಿಜ್ಯ ಮಳಿಗೆ ಚರಂಡಿ ಸ್ವಚ್ಛಗೊಳಿಸಿಲು ಬಂದಿದ್ದ ಕಾರ್ಮಿಕರಾದ 35 ವರ್ಷದ ರಾಮು ಮತ್ತು 28 ವರ್ಷದ ರವಿ ಮೃತಪಟ್ಟಿದ್ದಾರೆ.
ಮ್ಯಾನ್ ಹೋಲ್ ಸ್ವಚ್ಛಗೊಳಿಸುವಾಗ ಒಳಗೆ ಸಿಲುಕಿ ಉಸಿರಾಡಲು ಸಾಧ್ಯವಾಗದೇ ಇಬ್ಬರು ಒಳಗೆ ಮೃತಪಟ್ಟಿದ್ದಾರೆ. ರಾಮು ಮ್ಯಾನ್ ಹೋಲ್ ಕ್ಲೀನ್ ಮಾಡಲು ಒಳಗೆ ಇಳಿದಿದ್ದರು ಈ ವೇಳೆ ಉಸಿರುಗಟ್ಟಿ ಕೂಗಾಡಿದ್ದಾರೆ. ಆಗ ರಾಮು ನನ್ನು ರಕ್ಷಣೆ ಮಾಡಲು ಮ್ಯಾನ್ ಹೋಲ್ ಗೆ ರವಿ ಸಹ ಇಳಿದ್ದಿದ್ದು ಇಬ್ಬರು ಮೃತಪಟ್ಟಿದ್ದಾರೆ. 
ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಇಬ್ಬರ ಶವಗಳನ್ನು ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

Asian Games: ಇರಾನ್ ನ್ನು ಮಣಿಸಿ ಚಿನ್ನ ಮುಡಿಗೇರಿಸಿಕೊಂಡ ಭಾರತೀಯ ಪುರುಷರ ಕಬಡ್ಡಿ ತಂಡ

ಕೊನೆಯ ವಿಶ್ವಕಪ್: ಏಕದಿನಕ್ಕೂ ನಿವೃತ್ತಿ ಘೋಷಿಸುವ ಸುಳಿವು ನೀಡಿದ ವಿರಾಟ್ ಕೊಹ್ಲಿ; ಅಭಿಮಾನಿಗಳು ಶಾಕ್!

ಮಮತಾ ಬಣದ ಟಿಎಂಸಿ ಶಾಸಕರ ಕಾರಿನ ಮೇಲೆ ಕಲ್ಲು, ಮೊಟ್ಟೆಗಳ ಎಸೆತ

ಇನ್‌ಸ್ಟಾಗ್ರಾಂನಲ್ಲಿ ಪರಿಚಯ, ಬಳಿಕ ಲೈಂಗಿಕ ದೌರ್ಜನ್ಯ; 16ರ ಬಾಲಕಿ ಪ್ರಕರಣದಲ್ಲಿ 19ರ ಯುವಕ ಅರೆಸ್ಟ್