ಮೈಸೂರಿನ ಬೆಳವಾಡಿಯಲ್ಲಿ ನಿನ್ನೆ ಮೃತಪಟ್ಟ ತಂದೆ ಮತ್ತು ಮಗನ ಚಿತ್ರ 
ರಾಜ್ಯ

ಮಗನ ಸಾವು ಹಿಂಬಾಲಿಸಿದ ತಂದೆ !

ಮಗನ ಸಾವಿನ ದು:ಖದಿಂದ ಕಂಗಲಾದ ತಂದೆಯೂ ಕೂಡಾ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ಮೈಸೂರಿನ ಬೇಳವಾಡಿಯಲ್ಲಿ ನಿನ್ನೆ ನಡೆದಿದೆ.

ಮೈಸೂರು: ಮಗನ ಸಾವಿನಿಂದ ದು;ಖಿತರಾಗಿದ್ದ ತಂದೆಯೂ ಕೂಡಾ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ಮೈಸೂರಿನ ಬೆಳವಾಡಿಯಲ್ಲಿ ನಿನ್ನೆ ನಡೆದಿದೆ.

ಬೈರೇಗೌಡ ಹಾಗೂ ಆತನ ತಂದೆ ಪುಟ್ಟೇಗೌಡ ಮೃತಪಟ್ಟ ದುರ್ದೈವಿಗಳು. ಇಬ್ಬರ ಮೃತದೇಹಗಳನ್ನು ಒಂದೇ ಕಡೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪುಟ್ಟೇಗೌಡರು,  ಬಾಯಿ ಕ್ಯಾನ್ಸರ್ ನಿಂದ ನರಳುತ್ತಿದ್ದ ಬೈರವನಿಗೆ ಉತ್ತಮ ಚಿಕಿತ್ಸೆ ಕೊಡಿಸಲು ಸಾಕಷ್ಟು ಖರ್ಚು ಮಾಡಿದ್ದರು. ಆದರೆ, ಬೈರವ ಬದುಕುಳಿಯಲಿಲ್ಲ. ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದರು.

 ಇದರಿಂದ ಸಾಕಷ್ಟು ಮನನೊಂದಿದ್ದ ಪುಟ್ಟೆಗೌಡರಿಗೆ ಬೈರವನ ಅಂತಿಮ ಯಾತ್ರೆಯ ಸಂದರ್ಭದಲ್ಲಿಯೇ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೈರವನ ಅಂತಿಮ ವಿಧಿ ವಿಧಾನ ಕಾರ್ಯಗಳನ್ನು ಸ್ಥಗಿತಗೊಳಿಸಿದ ಗ್ರಾಮಸ್ಥರು, ತಂದೆ ಹಾಗೂ ಮಗನ ಅಂತ್ಯಸಂಸ್ಕಾರವನ್ನು ಒಟ್ಟಿಗೆ ನೆರವೇರಿಸಿದರು. ತಂದೆ ಹಾಗೂ ಮಗನ ಸಾವಿನಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!