ಅನೀಶ್ 
ರಾಜ್ಯ

ಚಿಕ್ಕಮಗಳೂರು: ಗಂಟಲಲ್ಲಿ ಅವಲಕ್ಕಿ ಸಿಲುಕಿ 3 ವರ್ಷದ ಮಗು ಸಾವು

ಗಂಟಲಲ್ಲಿ ಅವಲಕ್ಕಿ ಸಿಲುಕಿ ಉಸಿರುಗಟ್ಟಿ ಮೂರು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸೋಮವಾರ ನಡೆದಿದೆ....

ಚಿಕ್ಕಮಗಳೂರು: ಗಂಟಲಲ್ಲಿ ಅವಲಕ್ಕಿ ಸಿಲುಕಿ ಉಸಿರುಗಟ್ಟಿ ಮೂರು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸೋಮವಾರ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಸಮೀಪದ ಶಿರಗುಂದ ನಿವಾಸಿ ದುರ್ಗಾಪ್ರಸಾದ್ ಅವರ ಪುತ್ರ ಅನೀಶ್ (3) ಮೃತಪಟ್ಟ ಬಾಲಕ.
ನಿನ್ನೆ ಅವಲಕ್ಕಿ ತಿನ್ನುವಾಗ ಗಂಟಲಲ್ಲಿ ಸಿಲುಕಿದ್ದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಉಸಿರುಗಟ್ಟಿದ್ದ ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಸಲಹೆ ಮಾಡಿದ್ದರು. ಆದರೆ ಮಾರ್ಗದಲ್ಲೇ ಮಗು ಮೃತಪಟ್ಟಿದೆ.
ಇತ್ತೀಚಿಗಷ್ಟೆ ರಾಮನಗರದಲ್ಲಿ ಸೆರಿಲಾಕ್ ಸೇವಿಸಿದ್ದ ಮೂರು ತಿಂಗಳ ಹೆಣ್ಣು ಮಗು ಮೃತಪಟ್ಟಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಸೇಬು ಸೇವಿಸುವ ವೇಳೆ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡಿದ್ದರಿಂದ 11 ವರ್ಷದ ಬಾಲಕ ಆಸೀಫ್ ಅಸುನೀಗಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!