ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ತನ್ನ ಇಬ್ಬರು ಮಕ್ಕಳಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ತಾಯಿಯೊಬ್ಬಳು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯನಗರದ ಮಾರತ್ ಹಳ್ಳಿಯಲ್ಲಿ ನಡೆದಿದೆ....

ಬೆಂಗಳೂರು: ತನ್ನ ಇಬ್ಬರು ಮಕ್ಕಳಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ತಾಯಿಯೊಬ್ಬಳು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯನಗರದ ಮಾರತ್ ಹಳ್ಳಿಯಲ್ಲಿ ನಡೆದಿದೆ.
26 ವರ್ಷದ ರಾಮಲಮ್ಮ ತನ್ನ 4 ವರ್ಷದ ಬಸವಂತ್ ಹಾಗೂ 2 ವರ್ಷದ ಹಸಿನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ರಾಮಲಮ್ಮ ಮಾಗೇಂದ್ರ ಎಂಬ ದಿನಗೂಲಿ ನೌಕರನ್ನು ವಿವಾಹವಾಗಿದ್ದು, ದಂಪತಿ ತಮಿಳುನಾಡು ಮೂಲದವರಾಗಿದ್ದಾರೆ. ಇಂದು ಬೆಳಗ್ಗೆ ಮಾಗೇಂದ್ರ ಎಂದಿನಂತೆ ಕೆಲಸಕ್ಕೆ ತೆರಳಿದ ನಂತರ ಸುಮಾರು 8.30ರ ಸುಮಾರಿಗೆ ಮಕ್ಕಳಿಗೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಿರುಚಾಟ ಕೇಳಿದ ಅಕ್ಕಪಕ್ಕದ ಮನೆಯವರು ರಕ್ಷಿಸಲು ಪ್ರಯತ್ನಿಸಿದ್ದಾರೆ, ಆದರೆ ಒಳಗಿನಿಂದ ಲಾಕ್ ಮಾಡಿದ್ದ ಕಾರಣ ಯಾವುದೇ ಪ್ರಯೋಜನವಾಗಲಿಲ್ಲ, ಮಾನಸಿಕ ರೋಗದಿಂದ ನರಳುತ್ತಿದ್ದ ರಾಮಲಮ್ಮ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು, ಕೇವಲ 4 ದಿನಗಳ ಹಿಂದೆಯಷ್ಚೇ ಆಕೆ ತಮಿಳು ನಾಡಿನಿಂದ ವಾಪಸ್ ಬಂದಿದ್ದಳು ಆಕೆಯ ಪತಿ ತಿಳಿಸಿದ್ದಾನೆ, ಎಚ್ ಎಎಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವಗಳನ್ನು ಬೌರಿಂಗ್ ಆಸ್ಪತ್ರೆಗ ಸಾಗಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್