ರಾಜ್ಯ

ಬೆಂಗಳೂರಿನ ಮೊದಲ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಪಾಯಿಂಟ್ ಗೆ ಶನಿವಾರ ಚಾಲನೆ

Lingaraj Badiger
ಬೆಂಗಳೂರು: ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ಪೆಟ್ರೋಲ್ ಬಂಕ್ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್ ಗೆ ಫೆಬ್ರವರಿ 17ರಂದು ಚಾಲನೆ ನೀಡಲಾಗುತ್ತಿದ್ದು, ಇದು ಸಿಲಿಕಾನ್ ಸಿಟಿಯಲ್ಲಿ ಸ್ಥಾಪನೆಯಾಗುತ್ತಿರುವ ಮೊದಲ ಚಾರ್ಜಿಂಗ್ ಪಾಯಿಂಟ್.
ಉದ್ಯಾನಗರಿಯಲ್ಲಿ ಮತ್ತೆ ಪರಿಸರ ಸ್ನೇಹಿ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಫೇಮ್ ಇಂಡಿಯಾ ಯೋಜನೆ ಅಡಿ ರಾಜ್ಯ ಸರ್ಕಾರ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲು ನಗರದ 11 ಕಡೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್ ಅನ್ನು ಸ್ಥಾಪಿಸುತ್ತಿದೆ.
ಚಾರ್ಜಿಂಗ್ ಪಾಯಿಂಟ್ ಸ್ಥಾಪನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಾಗ ನೀಡಿದ್ದು, ಬೆಸ್ಕಾಂ ಅದರ ನಿರ್ವಹಣೆ ಮಾಡಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಯೋಜನೆ ಕರ್ನಾಟಕ ವಿದ್ಯುತ್ ವಾಹನ ಮತ್ತು ಇಂಧನ ಶೇಖರಣಾ ನೀತಿ 2017ರ ಭಾಗವಾಗಿದ್ದು, ನಗರದಲ್ಲಿ ಮತ್ತಷ್ಟು ಚಾರ್ಜಿಂಗ್ ಪಾಯಿಂಟ್ ಗಳನ್ನು ಸ್ಥಾಪಿಸಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಅವರು ಹೇಳಿದ್ದಾರೆ.
SCROLL FOR NEXT