ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಳೆ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬಿಗಿ ಭದ್ರತೆ ಒದಗಿಸಲಾಗುತ್ತದೆ.
ನಾಳೆ ಕಾವೇರಿ ಅಂತಿಮ ತೀರ್ಪು ಹಿನ್ನೆಲೆಯಲ್ಲಿ ನಗರದಾದ್ಯಂತ 15 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇನ್ನು ಹೆಚ್ಚುವರಿಯಾಗಿ ಕರ್ನಾಟಕ ರಾಜ್ಯ ಮೀಸಲು ಪಡೆಯನ್ನು ನಿಯೋಜಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಈ ಹಿಂದೆ ಗಲಭೆಗಳು ನಡೆದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಕಾವೇರಿ ನ್ಯಾಯಾಧೀಕರಣದ ಐ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಮತ್ತು ತಮಿಳುನಾಡು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು. ಈ ವಿಶೇಷ ಮೇಲ್ಮನವಿಯ ವಿಚಾರಣೆಯನ್ನು 2016ರ ಅಕ್ಟೋಬರ್ ರಿಂದ ಆರಂಭಿಸಿದ ಸುಪ್ರೀಂ ನ್ಯಾಯಪೀಠ 2017ರ ಸೆಪ್ಟೆಂಬರ್ ನಲ್ಲಿ ವಿಚಾರಣೆ ಪೂರ್ಣಗೊಳಿಸಿತ್ತು.
ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಡಿವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ರಚಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics