ರಾಜ್ಯ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, ಮೂವರು ಸಾವು, 7 ಕಾರ್ಮಿಕರ ರಕ್ಷಣೆ

Lingaraj Badiger
ಬೆಂಗಳೂರು: ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.  
ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎಂಟು ಕಾರ್ಮಿಕರನ್ನು ರಕ್ಷಿಸಿದ್ದು, ಇನ್ನು ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಅವಶೇಷಗಳಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು ಓರ್ವ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅವರ ಮೃತದೇಹವನ್ನು ಹೊರ ತೆಗೆಯಲಾಗಿದೆ. ಮೃತ ಕಾರ್ಮಿಕರು ಬಿಹಾರ ಮೂಲದವರು ಎನ್ನಲಾಗಿದೆ.
ವಸತಿಗಾಗಿ ಈ ಐದು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಬಳಿಕ ವಾಣಿಜ್ಯ ಬಳಕೆಗಾಗಿ ಕಟ್ಟಡ ನವೀಕರಣ ಕಾಮಗಾರಿ ನಡೆಸುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಅವರು ಭೇಟಿ ನೀಡಿದ್ದು, ಹಳೆ ಅಡಿಪಾಯದ ಮೇಲೆ ಮೂರು ಅಂತಸ್ತಿನ ಕಟ್ಟಡ ನಿರ್ಮಿಸುತ್ತಿದ್ದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಹೇಳಿದ್ದಾರೆ.
ಕಟ್ಟಡದ ಮಾಲೀಕರು ಯಾರು ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ದಾಖಲೆಗಳನ್ನು ತೆಗೆದು ತೆಗೆದುಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮೇಯರ್ ತಿಳಿಸಿದ್ದಾರೆ. 
SCROLL FOR NEXT