ಬೆಂಗಳೂರು: ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮದ್ ಹ್ಯಾರಿಸ್ ನಲಪಾಡ್ ಮತ್ತು ಇತರ ಹತ್ತು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ಯುಬಿ ಸಿಟಿಯಲ್ಲಿರುವ ರೆಸಾರ್ಟ್ ನಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಈ ಎಫ್ಐಆರ್ ದಾಖಲಾಗಿದೆ.
ಹ್ಯಾರೀಸ್ ಪುತ್ರನಿಂದ ಹಲ್ಲೆಗೊಳಗಾದವರನ್ನು ವಿದ್ವತ್ ಎಂದು ಗುರುತಿಸಲಾಗಿದೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ವೇಳೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು "ಅಪರಾಧಿಗಳು ಯಾರೇ ಆದರೂ ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು' ಎಂದಿದ್ದಾರೆ.
ಮಹಮದ್ ನಲಪಾಡ್ ಅವರು ಕಾಂಗ್ರೆಸ್ ಶಾಸಕರಾದ ಎನ್ಎ ಹ್ಯಾರಿಸ್ ಅವರ ಪುತ್ರರಾಗಿದ್ದಾರೆ.