ರಾಜ್ಯ

ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಟ್ರಾಕಿಂಗ್ ವ್ಯವಸ್ಥೆ

Nagaraja AB

ಬೆಂಗಳೂರು: ಮುಂಬರುವ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಿಗೆ ಹೆಚ್ಚಿನ ಸುರಕ್ಷತೆ ಮತ್ತು ಭದ್ರತೆ ಒದಗಿಸಲು
 ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮುಂದಾಗಿದ್ದು,  ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಟ್ರಾಕಿಂಗ್ ವ್ಯವಸ್ಥೆ ಅಳವಡಿಸಲಾಗುತ್ತಿದೆ.

2016 ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದಾಗಿ , ಪೊಲೀಸರ ಸಲಹೆ ಮೇರೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಮುಂದಾಗಿರುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದರ ಜೊತೆಗೆ 2017ರಲ್ಲಿ  ಕೈಗೊಂಡಿದ್ದ ಪರೀಕ್ಷಾ ಸುರಕ್ಷತಾ ವ್ಯವಸ್ಥೆಯನ್ನು ಈ ವರ್ಷವೂ ಮುಂದುವರೆಸಲಾಗುವುದು, ಜಿಲ್ಲಾ, ತಾಲೂಕು ಖಜಾನೆ ಸೇರಿದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಅಳವಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪರೀಕ್ಷಾ ನಿಯಂತ್ರಕರಿಗೆ ಬಯೋಮೆಟ್ರಿಕ್ ಮೂಲಕ ಹಾಜರಾತಿ ಕಡ್ಡಾಯಗೊಳಿಸಲಾಗಿದೆ. ಸ್ಕ್ವಾಡ್ ಮತ್ತಿತರ ಸಿಬ್ಬಂದಿಗಳನ್ನು ಅಕಾಡೆಮಿ ಮೂಲಕ ನಿಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


SCROLL FOR NEXT