ಬೆಂಗಳೂರು: ಕಾವೇರಿ ನ್ಯಾಯ ಮಂಡಳಿಯ ಶಿಫಾರಸುಗಳನ್ನು ಜಾರಿಗೊಳಿಸಲು 6 ವಾರಗಳಲ್ಲಿ ಸಮಿತಿಯೊಂದರನ್ನು ರಚಿಸುವ ಪ್ರಸ್ತಾವಕ್ಕೆ ರಾಜ್ಯದ ವಿರೋಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಕಾವೇರಿ ನ್ಯಾಯ ಮಂಡಳಿ ರಚಿಸುವಂತೆ ಸೂಚಿಸಲಾಗಿದೆ ಎಂಬ ಸುಪ್ರೀಂಕೋರ್ಟ್ ತೀರ್ಪವನ್ನು ಅಲ್ಲಗೆಳೆದಿರುವ ಅವರು, ಇಂತಹ ಯಾವುದೇ ಸೂಚನೆ ತೀರ್ಪಿನಲ್ಲಿ ಇಲ್ಲ. ಈ ಬಗ್ಗೆ ವಕೀಲರ ಜೊತೆ ಚರ್ಚಿಸಿ ಮಾಹಿತಿ ಪಡೆದುಕೊಳ್ಳುತ್ತೇನೆಂದು ಹೇಳಿದ್ದಾರೆ.
ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಈ ವಿಷಯದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳನ್ನು ಸಂಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಬೇಕು. ಒಂದು ವೇಳೆ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಮಂಡಳಿ ರಚನೆಗೆ ಮುಂದಾದರೆ ವಿರೋಧಿಸುತ್ತೇವೆ. ಕೇಂದ್ರ ಸರ್ಕಾರ ಕಾವೇರಿ ನದಿ ಪಾತ್ರದ ರಾಜ್ಯಗಳ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಮಂಡಳಿ ರಚನೆ ಮಾಡಬೇಕು ಎಂದು ತಿಳಿಸಿದ್ದಾರೆ.