ಬೆಂಗಳೂರು: ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನಿಂದ ಯುವಕನ ಹಲ್ಲೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಭಾನುವಾರ ಹೇಳಿದ್ದಾರೆ.
ಪ್ರಕರಣ ಸಂಬಂಧ ಖಾಸಗಿ ಮಾಧ್ಯಮವೊಂದರಲ್ಲಿ ಮಾತನಾಡಿರುವ ಅವರು, ಯಾರೇ ತಪ್ಪು ಮಾಡಿದರೂ ಅದು ತಪ್ಪೇ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಎಂದು ಹೇಳಿದ್ದಾರೆ.
ತಪ್ಪು ಮಾಡಿದವರು ಶಿಕ್ಷೆ ಅನುಭವಿಸುವುದು ಖಚಿತ. ಯಾರೇ ತಪ್ಪು ಮಾಡಿದರೂ ಅದು ತಪ್ಪೇ. ಈ ಹಿಂದೆ ಕೂಡ ಎರಡು, ಮೂರು ಬಾರಿ ಇದೇ ರೀತಿ ನಡೆದಿದೆ. ಈ ಬಗ್ಗೆ ಹ್ಯಾರಿಸ್ ಅವರೂ ಕೂಡ ಒಪ್ಪಿಕೊಂಡಿದ್ದಾರೆ. ಹ್ಯಾರಿಸ್ ಮತ್ತು ಅವರ ಗ್ಯಾಂಗ್ ಬಂಧನಕ್ಕೊಳಗಾಗುವುದು ಖಚಿತ. ಕಾನೂನಿಗಿಂತ ದೊಡ್ಡವರೂ ಯಾರೂ ಇಲ್ಲ. ಪೊಲೀಸರು ಇರುವುದೇ ಆರೋಪಿಗಳನ್ನು ಬಂಧನಕ್ಕೊಳಪಡಿಸಲು. ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಸೆಕ್ಷನ್ ಸರಿಯಿಲ್ಲ ಎಂದರೆ, ಸರಿಪಡಿಸಲು ಹೇಳುತ್ತೇನೆ. ಈ ಬಗ್ಗೆ ಪೊಲೀಸ್ ಆಯುಕ್ತರೊಂದಿಗೂ ಮಾತುಕತೆ ನಡೆಸುತ್ತೇನೆಂದು ತಿಳಿಸಿದ್ದಾರೆ.