ಬಂದೂಕಿನ (ಸಾಂದರ್ಭಿಕ ಚಿತ್ರ) 
ರಾಜ್ಯ

ಶಿವಾಜಿ ಜಯಂತಿ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಕಾರ್ಪೋರೇಟರ್

ಇಲ್ಲಿನ ಶಿವಾಜಿ ವೃತ್ತದಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಕಾಂಗ್ರೆಸಿನ ನಾಮನಿರ್ದೇಶಿತ ಕಾರ್ಪೋರೇಟರ್ ಮಂಜುನಾಥ್ ಕದಮ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಧಾರವಾಡ: ಇಲ್ಲಿನ ಶಿವಾಜಿ ವೃತ್ತದಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಕಾಂಗ್ರೆಸಿನ ನಾಮನಿರ್ದೇಶಿತ ಕಾರ್ಪೋರೇಟರ್  ಮಂಜುನಾಥ್ ಕದಮ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಜಯಂತೋತ್ಸವದಲ್ಲಿ ಮೈ ಮರೆತಿದ್ದ  ಮಂಜುನಾಥ್ ಕದಂ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ . ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತವಾರಣ ಸೃಷ್ಟಿಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಆತನಿಂದ ಬಂದೂಕು ಪಡೆದು ವಿಚಾರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂದೂಕು ಪರವಾನಗಿ ಹೊಂದಿದ್ದು, ಘಟನೆ ಸಂಬಂಧ ಪಟ್ಟಣ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಉದ್ದೇಶಪೂರ್ವಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಒಂದು ವೇಳೆ ತಪಿತಸ್ಥರು ಎಂದು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎಂ. ಎನ್. ನಾಗರಾಜ್ ತಿಳಿಸಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT