ರಾಜ್ಯ

ಮಲ್ಲಿಗೆ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರಿಂದ ಸ್ವಾಗತ

Manjula VN
ಮೈಸೂರು: ಮಲ್ಲಿಗೆ ನಗರಿ ಮೈಸೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸಿದ್ದು, ಮಂಡಕಳ್ಳಿಗೆ ಆಗಮಿಸಿದ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯಿ ವಾಲಾ ಅವರು ಸ್ವಾಗತಿಸಿದ್ದಾರೆ. 
ಭಾನುವಾರ ರಾತ್ರಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಯವರಿಗೆ ಕೇಂದ್ರ ಸಚಿವ ಅನಂತ್ ಕುಮಾರ್, ಡಿ.ವಿ. ಸದಾನಂದಗೌಡ, ಪ್ರಕಾಶ್ ಜವಡೇಕರ್, ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ರಾಜ್ಯ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಹಾಗೂ ಅಧಿಕಾರಿಗಳು ಸ್ವಾಗತ ಕೋರಿದರು. 
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಕಳೆದ ರಾತ್ರಿಯೇ ಮೈಸೂರಿನ ರ್ಯಾಡಿಸನ್ ಬ್ಲ್ಯೂ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. 
ಇಂದು ಬೆಳಿಗ್ಗೆ 8.30ಕ್ಕೆ ಅಲ್ಲಿದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜೊತೆಗೆ ಮಾತನಾಡಲಿದ್ದಾರೆಂದು ತಿಳಿದುಬಂದಿದೆ. ನಂತರ ಶ್ರವಣಬೆಳಗೊಳಕ್ಕೆ ತೆರಳಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮಧ್ಯಾಹ್ನ 3ಗಂಟೆಗೆ ಮೈಸೂರಿನ ರೈಲು ನಿಲ್ದಾಣದಲ್ಲಿ ನಡೆಯುವ ರೈಲ್ವೆ ವಿದ್ಯುದೀಕರಣ ಯೋಜನೆ, ನಾಗನಹಳ್ಳಿ ರೈಲ್ವೆ ಟರ್ಮಿನಲ್ ನಿರ್ಮಾಣ ಮತ್ತು ಮೈಸೂರು-ಬೆಂಗಳೂರು ಅಷ್ಟಪಥ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿಲಿದ್ದಾರೆ. 
ಮಧ್ಯಾಹ್ನ 3.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಬಿಜೆಪಿ ರ್ಯಾಲಿಯಲ್ಲಿ ಮೋದಿಯವರು ಭಾಷಣ ಮಾಡಲಿದ್ದಾರೆ. 
SCROLL FOR NEXT