ರಾಜ್ಯ

ಬೆಂಗಳೂರು: ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಎರಚಿ, ಧಮ್ಕಿ ಹಾಕಿದ 'ಕೈ' ಮುಖಂಡ

Srinivasamurthy VN
ಬೆಂಗಳೂರು: ಕೆಆರ್ ಪುರಂನ ಬ್ಲಾಕ್ ಕಾಂಗ್ರೆಸ್ ಮುಖಂಡರೊಬ್ಬರು ಬೃಹತ್ ಬೆಂಗಳೂರು ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಾಕುವ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕೆಆರ್ ಪುರಂನ ಬ್ಲಾಕ್ ಕಾಂಗ್ರೆಸ್ ಮುಖಂಡ ನಾರಾಯಣ ಸ್ವಾಮಿ ಎಂಬುವವರು ಇಂತಹ ಕೃತ್ಯವೆಸಗಿದ್ದು, ಮೂಲಗಳ ಪ್ರಕಾರ ಜಮೀನಿಗೆ ಅಕ್ರಮವಾಗಿ ಖಾತೆ ಮಾಡಿಕೊಡದ ಕಾರಣಕ್ಕಾಗಿ ನಾರಾಯಣ ಸ್ವಾಮಿ ಹೊರಮಾವು  ಬಿಬಿಎಂಪಿ  ಕಚೇರಿಗೆ ಪೆಟ್ರೋಲ್ ಸುರಿದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಜಮೀನು ಖಾತೆ ಮಾಡಿಕೊಡದಿದ್ದರೆ ಕಚೇರಿಗೆ ಬೆಂಕಿ ಹಚ್ಚುವುದಾಗಿ ಅಲ್ಲಿದ್ದ ಅಧಿಕಾರಿಗಳನ್ನು ಬೆದರಿಸಿದ ನಾರಾಯಣ ಸ್ವಾಮಿ ಅವರು ತನ್ನ ಆಪ್ತನ   ಕೈಯಲ್ಲಿದ್ದ  ಪೆಟ್ರೋಲ್ ಬಾಟಲ್ ಅನ್ನು ಕಿತ್ತುಕೊಂಡು ಕಚೇರಿಯ ಕಡತಗಳಿರುವ ಕವಾಟಿಗೆ ಪೆಟ್ರೋಲ್ ಎರಚಿದರು ಎಂದು ತಿಳಿದುಬಂದಿದೆ. 
ನಾರಾಯಣ ಸ್ವಾಮಿ ಅವರು, ಶಾಸಕ ಭೈರತಿ ಬಸವರಾಜ್  ಆಪ್ತರಾಗಿರುವ ಜಲಮಂಡಳಿ ಸದಸ್ಯ ನಾರಾಯಣ ಸ್ವಾಮಿ ಎಂಬವರು ಫೆಬ್ರವರಿ 16ರಂದು  ಈ ಕೃತ್ಯ ನಡೆಸಿದ್ದು, ಘಟನೆ ತಡವಾಗಿ  ಬೆಳಕಿಗೆ ಬಂದಿದೆ. ನಾರಾಯಣ  ಸ್ವಾಮಿ  ಗೂಂಡಾಗಿರಿ ವರ್ತನೆಯ ವಿಡಿಯೊ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದೆ.
ನಾನು ತಪ್ಪು ಮಾಡಿಲ್ಲ, ಅಧಿಕಾರಿಗಳ ದುಂಡಾವರ್ತನೆಯಿಂದ ಬೇಸತ್ತಿದ್ದೆ
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ನಾರಾಯಣ ಸ್ವಾಮಿ ತಾವು ಯಾವುದೇ ರೀತಿಯ ತಪ್ಪು ಮಾಡಿಲ್ಲ ಆದರೆ ಹೊರಮಾವು ಬಿಬಿಎಂಪಿ ಕಚೇರಿಯ ಅಧಿಕಾರಿಗಳು ಯಾವುದೇ ಕೆಲಸ ಮಾಡುತ್ತಿರಲಿಲ್ಲ.  ಇದರಿಂದ ನಾನು ಬೇಸತ್ತಿದ್ದೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ.
ನಾರಾಯಣ ಸ್ವಾಮಿ ಬಂಧನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಏತನ್ಮಧ್ಯೆ ಪ್ರಕರಣ ಸಂಬಂಧ ಮಾಧ್ಯಮ ವರದಿ ಕುರಿತು ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಕೇಳಿದಾಗ, ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಅವಶ್ಯಕತೆ ಇದ್ದರೆ ನಾರಾಯಣಸ್ವಾಮಿ  ಅವರನ್ನು ಬಂಧಿಸಿ, ಕೂಡಲೇ ಕಾನೂನು ರೀತಿ ಕ್ರಮ ತೆಗೆದುಕೊಳ್ಳಿ ಎಂದು ಸಿದ್ದರಾಮಯ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
SCROLL FOR NEXT