ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕರ್ನಾಟಕ: ರಾಜ್ಯದ 6,800 ಕಿ.ಮೀ ರಸ್ತೆಗಳ ನವೀಕರಣಕ್ಕೆ ಕೇಂದ್ರ ನಿರ್ಧಾರ

ರಾಜ್ಯದ 6,800 ಕಿ.ಮೀ ರಸ್ತೆಗಳನ್ನು ನವೀಕರಣಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ...

ಸಾಂದರ್ಭಿಕ ಚಿತ್ರ
Manjula VN
Updated On : 20 Feb 2018, 11:17 am
ಬೆಂಗಳೂರು; ರಾಜ್ಯದ 6,800 ಕಿ.ಮೀ ರಸ್ತೆಗಳನ್ನು ನವೀಕರಣಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 
ರೂ.1.44 ಲಕ್ಷ ಕೋಟಿ ವೆಚ್ಚದಲ್ಲಿ ರಾಜ್ಯದ ರಸ್ತೆಗಳನ್ನು ಉತ್ತಮ ದರ್ಜೆಯ ರಸ್ತೆಗಳನ್ನಾಗಿ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. 
ರಾಜ್ಯದ 6,800 ಕಿಮೀ ರಾಷ್ಟ್ರೀಯ ಹೆದ್ದಾರಿಗಳನ್ನು ಉತ್ತಮ ದರ್ಜೆಗೇರಿಸುವ 150 ಕಾರ್ಯಗಳಿಗೆ ಈಗಾಗಲೇ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್'ಹೆಚ್ಎಐ) ಒಪ್ಪಿಗೆ ನೀಡಿದೆ ಎಂದು ವರದಿಗಳು ತಿಳಿಸಿವೆ. 

Advertisement

Advertisement

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿ-ಅಂಬಾರಗೊಡ್ಲು ನಡುವೆ ನಿರ್ಮಾಣವಾಗಲಿರುವ ರೂ.600 ಕೋಟಿ ವೆಚ್ಚದ ರಾಜ್ಯದ 2ನೇ ಅತಿ ಉದ್ದದ ಸಿಗಂದೂರು (ತುಮರಿ) ಸೇತುವೆ ಸೇರಿ ಹಲವು ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಿ ಚಾಲನೆ ನೀಡಿ ಮಾತನಾಡಿರುವ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು, ಚೆನ್ನೈ-ಬೆಂಗಳೂರು, ಹೈದರಾಬಾದ್-ಬೆಂಗಳೂರು ರಸ್ತೆಯನ್ನು ಎಕ್ಸ್'ಪ್ರೆಸ್ ಹೆದ್ದಾರಿಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಬೆಂಗಳೂರು ಮತ್ತು ಮೈಸೂರು ನಡುವೆ 117 ಕಿ.ಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ರೂ.7 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. ಬೆಂಗಳೂರು-ಅಮರಾವತಿ-ಹೈದರಾಬಾದ್ ನಡುವೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೂ ಯೋಜನೆ ರೂಪಿಸಲಾಗಿದೆ. ಮುಂದಿನ 2 ವರ್ಷದೊಳಗೆ ರಸ್ತೆ ಅಭಿವೃದ್ಧಿಗಾಗಿ ರಾಜ್ಯಕ್ಕೆ ರೂ.2 ಲಕ್ಷ ಕೋಟಿ ಅನುದಾನ ಒದಗಿಸಲಾಗುವುದು ಎಂದು ಹೇಳಿದ್ದಾರೆ. 
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಿರಡಿ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಿಸುವ ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ಈ ಕಾಮಗಾರಿಗೆ ಈ ವರ್ಷವೇ ಟೆಂಡರ್ ಕರೆಯಲಾಗುತ್ತದೆ. ಯೋಜನೆಯನ್ನು ಕೇಂದ್ರ ಸರ್ಕಾರವೇ ಅನುಷ್ಟಾನಗೊಳಿಸಲಿದೆ. ಪಶ್ಚಿಮಘಟ್ಟದ ಮೂಲಕ ಹಾದುಹೋಗುವ ಈ ಮಾರ್ಗಕ್ಕೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಒಪ್ಪಿಗೆ ನೀಡಿಲ್ಲ. ಹೀಗಾಗಿ ಯೋಜನೆ ಸ್ವಲ್ಪ ವಿಳಂಬವಾಗಿದೆ ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments