ಪುನೀತ್ ರಾಜಕುಮಾರ್ 
ರಾಜ್ಯ

ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ವಿದ್ವತ್ ಆರೋಗ್ಯ ವಿಚಾರಿಸಿದ ಪುನೀತ್ ರಾಜಕುಮಾರ್

ಶಾಂತಿನಗರದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿಂದ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್ ನನ್ನು ಆಸ್ಪತ್ರೆಯಲ್ಲಿ

ಬೆಂಗಳೂರು: ಶಾಂತಿನಗರದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿಂದ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್ ನನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಆರೋಗ್ಯ ವಿಚಾರಿಸಿದ್ದಾರೆ. 
ಮೊಹಮ್ಮದ್ ನಲಪಾಡ್ ಗ್ಯಾಂಗ್ ನಿಂದ ತೀವ್ರ ಹಲ್ಲೆಗೊಳಗಾಗಿದ್ದ ವಿದ್ವತ್ ಫೆಬ್ರವರಿ 17ರಿಂದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ವತ್ ಡಾ. ರಾಜಕುಮಾರ್ ಕುಟುಂಬದ ಕುಡಿ ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಗುರು ರಾಜಕುಮಾರ್ ಆಪ್ತರ ಸ್ನೇಹಿತರಾಗಿದ್ದರಿಂದ ಪುನೀರ್ ರಾಜಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ವತ್ ಆರೋಗ್ಯವನ್ನು ವಿಚಾರಿಸಿದರು. 
ಆಸ್ಪತ್ರೆಯಿಂದ ಹೊರಬಂದ ನಂತರ ಮಾತನಾಡಿದ ಪುನೀತ್ ಕುಮಾರ್ ಅವರು ತಪ್ಪಿಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ನಾನು ಚಿಕ್ಕವಯಸ್ಸಿನಿಂದ ವಿದ್ವತ್ ನನ್ನು ನೋಡಿದ್ದೇನೆ. ಸದ್ಯ ವಿದ್ವತ್ ಆರೋಗ್ಯ ತಕ್ಕಮಟ್ಟಿಗೆ ಚೇರಿಸಿಕೊಂಡಿದೆ ಎಂದರು. 
ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಫೆ.17 ರಂದು ರಾತ್ರಿ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಎಂಬ ಯುವಕನಿಗೆ ಮನಬಂದಂತೆ ಥಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!