ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹಾಡಹಗಲೇ ಬಿಎಂಟಿಸಿ ಬಸ್ ಒಳನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ!

ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಬಿಎಂಟಿಸಿ ಬಸ್ ಒಳಗೆ ನುಗ್ಗಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ...

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಬಿಎಂಟಿಸಿ ಬಸ್ ಒಳಗೆ ನುಗ್ಗಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ. 
ಅತ್ತಿಬೆಲೆಯಿಂದ ಬೆಂಗಳೂರು ನಗರಕ್ಕೆ ಬರುತ್ತಿದ್ದ ಬಸ್ಸನ್ನು ಚಂದಾಪುರದಿಂದ ಹಿಂಬಾಲಿಸಿರುವ ದುಷ್ಕರ್ಮಿಗಳು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕೋನಪ್ಪನ ಅಗ್ರಹಾರದ ಬಳಿ ಬಸ್ ನಿಲ್ಲುತ್ತಿದ್ದಂತೆಯೇ ಒಳ ನುಗ್ಗಿದ್ದಾರೆ. 
ಬಳಿಕ ಆಂಧ್ರಪ್ರದೇಶ ಮೂಲದವರೆಂದು ಹೇಳಲಾಗುತ್ತಿರುವ 35 ವರ್ಷದ ವ್ಯಕ್ತಿಯೊಬ್ಬರನ್ನು ಇರಿದು, ಸ್ಥಳದಿಂದ ಪರಾರಿಯಾಗಿದ್ದಾರೆ. 
ಇರಿತಕ್ಕೊಳಗಾದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಭೀಕರ ದೃಶ್ಯವನ್ನು ಕಂಡ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ. 
ಬಸ್ಸಿನೊಳಗೆ ನುಗ್ಗಿರುವ ದುಷ್ಕರ್ಮಿಗಳು ವ್ಯಕ್ತಿಯೊಂದಿಗೆ ತೆಲುಗು ಭಾಷೆಯಲ್ಲಿ ಮಾತಿನ ಚಕಮಕಿ ನಡೆಸಿದ್ದಾರೆ. ನಂತರ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಹತ್ಯೆಗೆ ಮಹಿಳೆಯೊಂದಿಗಿನ ಅಕ್ರಮ ಸಂಬಂಧವೇ ಕಾರಣವೆಂದು ವರದಿಗಳು ತಿಳಿಸಿವೆ. 
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!