ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರೀಸ್ ಚಿತ್ರ 
ರಾಜ್ಯ

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಸಹಚರರಿಗೆ ಮಾರ್ಚ್ 7ರವರೆಗೆ ನ್ಯಾಯಾಂಗ ಬಂಧನ

ಶಾಸಕ ಹ್ಯಾರಿಸ್ ಪುತ್ರನಿಗೆ ಮೊಹಮ್ಮದ್ ನಲಪಾಡ್ ಹಾಗೂ ಆತನ 8 ಮಂದಿ ಸಹಚರರಿಗೆ ಮಾರ್ಚ್ 7ರ ವರೆಗೂ ನ್ಯಾಯಾಂಗ ಬಂಧನಕ್ಕೆ...

ಬೆಂಗಳೂರು:ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ​ಹ್ಯಾರಿಸ್  ಹಾಗೂ ಆತನ 8 ಮಂದಿ ಸಹಚರರಿಗೆ
 ಮಾರ್ಚ್ 7ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 8 ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

ಯು ಬಿ ಸಿಟಿ ರೆಸ್ಟೋರೆಂಟ್ ನಲ್ಲಿ ನಡೆದಿದ್ದ ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ಮೊಹಮ್ಮದ್ ನಲಪಾಡ್ ನನ್ನು ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ ನಂತರ 8 ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಎದುರು ಹಾಜರುಪಡಿಸಿದರು.

 ಪ್ರಕರಣದ ಬಗ್ಗೆ  ವಾದ ವಿವಾದ ಆಲಿಸಿದ ನ್ಯಾಯಾಧೀಶರು ಆರೋಪಿ ಮೊಹಮ್ಮದ್ ನಲಪಾಡ್  ಹಾಗೂ ಆತನ ಸಹಚರರನ್ನು ಮಾರ್ಚ್ 7ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದ್ದಾರೆ.

ನ್ಯಾಯಾಲಯದ ಈ ತೀರ್ಪಿನಿಂದಾಗಿ ಮೊಹಮ್ಮದ್ ನಲಪಾಡ್ ನಿಗೆ ಜೈಲೋ ಅಥವಾ ಬೇಲೂ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.ಮತ್ತೊಂದೆಡೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಫೆಬ್ರವರಿ 23ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!