ರಾಜ್ಯ

ಕರ್ನಾಟಕ: 2 ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳ ನೇಮಕ

Manjula VN
ಬೆಂಗಳೂರು: ಉಪ ಕುಲಪತಿಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದ್ದ ರಾಜ್ಯದ 8 ವಿಶ್ವವಿದ್ಯಾಲಯಗಳ ಪೈಕಿ 2 ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳನ್ನು ನೇಮಕ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 
ರಾಜ್ಯಪಾಲ ವಜುಭಾಯ್ ವಾಲಾ ಅವರು ಕರ್ನಾಟಕ ಜನಪದ ವಿಶ್ವವಿದ್ಯಾಲಯ ಮತ್ತು ಬೀದರ್'ನ ಪಶುವೈದ್ಯ ವಿಜ್ಞಾನ ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳ ನೇಮಕಾತಿ ಕಡತಕ್ಕೆ ಸಹಿ ಹಾಕಿದ್ದಾರೆಂದು ವರದಿಗಳು ತಿಳಿಸಿವೆ. 
ಜನಪದ ವಿಶ್ವವಿದ್ಯಾಲಯದಲ್ಲಿ ಉಸ್ತುವಾರಿ ಕುಲಪತಿಯಾಗಿದ್ದ ಡಾ.ಡಿ.ಬಿ. ನಾಯ್ಕ್ ಅವರನ್ನು ಉಪ ಕುಲಪತಿಗಳಾಗಿ, ಹಾಗೂ ಪಶುವೈದ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪೆಥಾಲಜಿ ವಿಭಾಗದಲ್ಲಿ ಪ್ರಧ್ಯಾಪಕರಾಗಿದ್ದ ಪ್ರೊ.ಹೆಚ್.ಡಿ. ನಾರಾಯಣ ಸ್ವಾಮಿಯವರನ್ನು ಪಶುವೈದ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿ ನೇಮಕ ಮಾಡಲಾಗಿದೆ ಎಂದು ವರದಿಗಳಿಂದ ತಿಳಿಸಿವೆ. 
ಇದೇ ವೇಳೆ ಶಿವಮೊಗ್ಗದ ತೋಟಗಾರಿಕಾ ವಿಶ್ವವಿದ್ಯಾಲಯದ ಉಪಕುಲಪತಿಗಳ ನೇಮಕಾತಿ ವಿಚಾರ ಕುರಿತ ಕಡತವನ್ನು ರಾಜ್ಯಪಾಲರು ಹಿಂದಕ್ಕೆ ಕಳುಹಿಸಿದ್ದಾರೆಂದು ತಿಳಿದುಬಂದಿದೆ. 
SCROLL FOR NEXT