ಸಾಂದರ್ಭಿಕ ಚಿತ್ರ 
ರಾಜ್ಯ

ರೇರಾ ಅನುಷ್ಠಾನದಲ್ಲಿ ಕರ್ನಾಟಕಕ್ಕೆ ದೇಶದಲ್ಲಿಯೇ ಎರಡನೇ ಸ್ಥಾನ

ರಿಯಲ್ ಎಸ್ಟೇಟ್ ನಿಯಂತ್ರಣ ಕಾಯಿದೆ (RERA) ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ...

ಬೆಂಗಳೂರು: ರಿಯಲ್ ಎಸ್ಟೇಟ್ ನಿಯಂತ್ರಣ ಕಾಯಿದೆ (RERA) ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ಮುಂಚೂಣಿಯಲ್ಲಿದೆ. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಮತ್ತು ಗ್ರಾಂಟ್ ತೊಂರ್ಟನ್ ಸಂಸ್ಥೆ ಕಳೆದ ವಾರ ಬಿಡುಗಡೆ ಮಾಡಿರುವ ರೆರಾ ಬಗ್ಗೆ ಜಂಟಿ ವರದಿಯಲ್ಲಿ ಯೋಜನೆಗಳ ದಾಖಲಾತಿಯಲ್ಲಿ ದೇಶದಲ್ಲಿ ಮಹಾರಾಷ್ಟ್ರ ನಂತರದ ಸ್ಥಾನದಲ್ಲಿ ಕರ್ನಾಟಕವಿದೆ. ಕಳೆದ ತಿಂಗಳು ಜನವರಿ 20ರವರೆಗೆ ಸಿಕ್ಕಿರುವ ಅಂಕಿಅಂಶವನ್ನು ವರದಿಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಈವರೆಗೆ ಸುಮಾರು 1,900 ರಿಯಲ್ ಎಸ್ಟೇಟ್ ಯೋಜನೆಗಳು ದಾಖಲಾಗಿದ್ದು 100ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ 12,000 ಯೋಜನೆಗಳು ಮತ್ತು 350 ದೂರುಗಳು ದಾಖಲಾಗಿವೆ. ದಕ್ಷಿಣ ಭಾರತದಲ್ಲಿ ತಮಿಳುನಾಡು 270 ಯೋಜನೆಗಳು ಮತ್ತು 100 ದೂರುಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಆಂಧ್ರಪ್ರದೇಶ, ಪುದುಚೆರಿ ಮತ್ತು ಕೇರಳಗಳಲ್ಲಿ ಮಧ್ಯಂತರ ಪ್ರಾಧಿಕಾರ ನೇಮಿಸಲಾಗಿದ್ದು, ಅವುಗಳ ರೇರಾ ಪೋರ್ಟಲ್ ನ್ನು ಆರಂಭಿಸಲಾಗಿದೆ. ತೆಲಂಗಾಣ ರಾಜ್ಯ ಇನ್ನೂ ರೇರಾ ಪೋರ್ಟಲ್ ನ್ನು ಆರಂಭಿಸಿಲ್ಲ.

ವರದಿ ಪ್ರಕಾರ, ರಿಯಲ್ ಎಸ್ಟೇಟ್ ಡೆವೆಲಪರ್ ಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಐದು ಪ್ರಶ್ನೆಗಳ ಮೂಲಕ ಅವರ ಅನುಸರಣಾ ಕಾರ್ಯವಿಧಾನವನ್ನು ನಿರ್ಣಯಿಸಲಾಗಿದೆ. ಅನುಸರಣಾ ಕಾರ್ಯವಿಧಾನವನ್ನು ನಿರ್ವಹಿಸಲು ಶೇಕಡಾ 45ರಷ್ಟು ಡೆವೆಲಪರ್ ಗಳಿಗೆ ಔಪಚಾರಿಕ ಪ್ರಕ್ರಿಯೆಗಳಿಲ್ಲ. ಇನ್ನು ಶೇಕಡಾ 44ರಷ್ಟು ಮಂದಿ ತಮ್ಮ ನಿರ್ವಹಣೆ ಮಾಹಿತಿ ವ್ಯವಸ್ಥೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT