ರಾಜ್ಯ

ಹಕ್ಕಿ ಜ್ವರ: ಬೆಂಗಳೂರಿನಲ್ಲಿ 900 ಕೋಳಿಗಳ ನಾಶ

Lingaraj Badiger
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ರೋಗಪೀಡಿತ 900 ಕೋಳಿಗಳನ್ನು ನಾಶ ಮಾಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಡಿಸೆಂಬರ್ 29ರಂದು ಬೆಂಗಳೂರಿನ ಕನಕಪುರ ರಸ್ತೆ ದಾಸರಹಳ್ಳಿಯ ಚಿಕನ್ ಸೆಂಟರ್ ನ ಕೋಳಿಗಳು ಅಸ್ವಾಭಾವಿಕವಾಗಿ ಮೃತಪಟ್ಟಿದ್ದು, ಅವುಗಳಲ್ಲಿ ಎಚ್5 ಎನ್1 ಹಕ್ಕಿ ಜ್ವರದ ವೈರಸ್ ಪತ್ತೆಯಾಗಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತ ಎಸ್ ನಾಗರಾಜು ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಮೃತ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಭೂಪಾಲದ "ನ್ಯಾಷನ್‌ನಲ್‌ ಇನ್ಸಿಟಿಟ್ಯೂಟ್‌ ಆಫ್ ಹೈಸೆಕ್ಯೂರಿಟಿ ಅನಿಮಲ್‌ ಡಿಸೀಸ್‌' (ಎನ್‌ಐಎಚ್‌ಎಸ್‌ಎಡಿ)ಗೆ ರವಾನಿಸಲಾಗಿತ್ತು. ಪರೀಕ್ಷೆಯಿಂದ ಸತ್ತ ಕೋಳಿಗಳ ಮಾದರಿಯಲ್ಲಿ ಹಕ್ಕಿ ಜ್ವರ (ಎಚ್‌5ಎನ್‌1) ಇರುವುದು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.
ಪಶು ಸಂಗೋಪನ ಇಲಾಖೆ ಆದೇಶದಂತೆ ಇದುವರೆಗೆ ನಗರದಲ್ಲಿ ಸೋಂಕು ತಗುಲಿದ 900 ಕೋಳಿಗಳನ್ನು ನಾಶಪಡಿಸಲಾಗಿದೆ ಎಂದು ನಾಗರಾಜು ತಿಳಿಸಿದ್ದಾರ.
ರೋಗ ಪತ್ತೆಯಾದ ದಾಸರಹಳ್ಳಿಯ ಭುವನೇಶ್ವರಿ ನಗರ ಹಾಗೂ ಅದರ ಒಂದು ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು "ರೋಗಪೀಡಿತ ವಲಯ' ಎಂದು ಹಾಗೂ 1ರಿಂದ 10 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಜಾಗೃತ ವಲಯ ಎಂದು ಘೋಷಿಸಲಾಗಿದೆ.
SCROLL FOR NEXT