ಇಂಧನ ಸಚಿವ ಡಿ.ಕೆ. ಶಿವಕುಮಾರ್ 
ರಾಜ್ಯ

24X7 ವಿದ್ಯುತ್ ಪೂರೈಕೆ ಮಾಡಲು ಸರ್ಕಾರ ಬದ್ಧವಾಗಿದೆ: ಡಿಕೆ ಶಿವಕುಮಾರ್

ರಾಜ್ಯದಲ್ಲಿ 24*7 ವಿದ್ಯುತ್ ಪೂರೈಕೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿ 24*7 ವಿದ್ಯುತ್ ಪೂರೈಕೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. 
'ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್' ಆಯೋಜಿಸಿದ್ದ 'ವಿಷನ್-2025' ಸಮಾವೇಶದಲ್ಲಿ ಮಾತನಾಡಿರುವ ಅವರು, 2013ರಲ್ಲಿ ನಾನು ಇಂಧನ ಸಚಿವನಾದಾಗ ರಾಜ್ಯದಲ್ಲಿ ಸಂಪೂರ್ಣವಾಗಿ 13 ಸಾವಿರ ಮೆಗಾ ವ್ಯಾಟ್ ನಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿತ್ತು. ಇದೀಗ 21,000 ಮೆ.ವ್ಯಾ ಉತ್ಪಾದನೆಯಾಗುತ್ತಿದೆ ಎಂದು ಹೇಳಿದ್ದಾರೆ. 
ಸೋಲಾರ್ ಶಕ್ತಿಯಿಂದ ವಿದ್ಯುತ್ ಉತ್ಪಾದನೆ ವಿಚಾರಕ್ಕೆ ಬಂದರೆ ಕರ್ನಾಟಕ ಉನ್ನತ ಸ್ಥಾನದಲ್ಲಿದೆ. ಕರ್ನಾಟಕ ಇದೀಗ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಎಂತಿ ತಿಳಿಸಿದ್ದಾರೆ. 
ತುಮಕೂರು ಜಿಲ್ಲೆ ಪಾವಗಡದಲ್ಲಿ ರಾಜ್ಯದ ಅತೀ ದೊಡ್ಡ ಸೋಲಾರ್ ಪಾರ್ಕ್ ಇದ್ದು, 2018ರ ಅಕ್ಟೋಬರ್ ತಿಂಗಳೊಳಗಾಗಿ ರಾಜ್ಯದಲ್ಲಿ 16,000 ಕಿಮೀ ವರೆಗೂ ಸೋಲಾರ್ ದೀಪಗಳನ್ನು ಅಳವಡಿಕೆ ಮಾಡಲಾಗುತ್ತದೆ ಎಂದಿದ್ದಾರೆ. 
ಮೂಲಭೂತ ಸೌಕರ್ಯವನ್ನು ಕರ್ನಾಟಕ ರಾಜ್ಯದಲ್ಲಿ ಉತ್ತಮವಾಗಿದ್ದು, ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ನಗರದಲ್ಲೆ ಆಗಮಿಸುತ್ತಿದ್ದಾರೆ. ಗ್ರಾಮಗಳಲ್ಲೇ ನಾವು ಉತ್ತಮ ವ್ಯವಸ್ಥೆಗಳನ್ನು ಕಲ್ಪಿಸಿದರೆ, ವಲಸೆ ಬರುವವರ ಸಂಖ್ಯೆ ಕಡಿಮೆಯಾಗುತ್ತದೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಹಾಗೂ ನೀರಿನ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಯತ್ನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ