ಬೆಂಗಳೂರು: ಮುಂದಿನ 2 ವರ್ಷಗಳಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಕರ್ನಾಟಕ ಉತ್ತಮ ರಾಜ್ಯವಾಗಿ ನಿರ್ಮಾಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ಆಯೋಜಿಸಿದ್ದ 'ವಿಷನ್-2025' ಸಮಾವೇಶದಲ್ಲಿ ಮಾತನಾಡಿರುವ ಅವರು, ಪ್ರತೀಯೊಬ್ಬರಿಗೂ ಉದ್ಯೋಗಾವಕಾಶವನ್ನು ಸೃಷ್ಟಿಸುವ ಅನುಕೂಲಕರ ಪರಿಸರ ವ್ಯವಸ್ಥೆಯನ್ನು ಕರ್ನಾಟಕ ಹೊಂದಿದೆ. ಕಳೆದ 4 ವರ್ಷಗಳಲ್ಲಿ ನಮ್ಮ ಸರ್ಕಾರ 15 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯ ಶೇಕಡಾವಾರು 2ಕ್ಕೆ ಇಳಿದಿದೆ. ಇದು ರಾಷ್ಟ್ರೀಯ ಸರಾಸರಿ 3.7 ಶೇಕಡಕ್ಕಿಂತ ಕಡಿಮೆಯಾಗಿದೆ. ಮುಂದಿನ 2 ವರ್ಷಗಳಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಕರ್ನಾಟಕ ಉತ್ತಮ ರಾಜ್ಯವಾಗಿ ನಿರ್ಮಾಣಗೊಳ್ಳಲಿದೆ ಎಂದು ಹೇಳಿದ್ದಾರೆ.
ಕರ್ನಾಟಕವನ್ನು ಹಸಿವು ಮುಕ್ತ, ಆರೋಗ್ಯಯುತ ಹಾಗೂ ಎಲ್ಲರಿಗೂ ಗೃಹ ಭಾಗ್ಯ ನೀಡುವಂತಹ ಹೊಸ ಮಾದರಿಯ ಅಭಿವೃಧ್ಧಿಯೊಂದಿಗೆ ಸಾಮಾಜಿಕ ಒಳಗೊಳ್ಳುವಿಕೆಯ ತತ್ತ್ವಗಳನ್ನು ಕೈಗೊಳ್ಳಲಾಗಿದೆ. ನಮ್ಮ ಎಲ್ಲಾ ಯೋಜನೆಗಳು ಇತರರರಿಗೆ ಮಾದರಿಯಾಗಲಿದೆ. ಬೆಂಗಳೂರು ನಗರ ವಿಶ್ವದ ಡೈನಾಮಿಕ್ ಸಿಟಿಯಾಗಿ ನಿರ್ಮಾಣಗೊಳ್ಳುತ್ತಿದೆ. ನಮ್ಮ ಅಭಿವೃದ್ಧಿ ತತ್ವಕ್ಕೆ ಬೆಂಗಳೂರು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics