ರಾಜ್ಯ

ಶೃಂಗೇರಿ ಮಠಕ್ಕೆ ಶೀಘ್ರದಲ್ಲೇ ರಾಹುಲ್ ಗಾಂಧಿ ಭೇಟಿ

Manjula VN
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಮೃದು ಹಿಂದುತ್ವ ನೀತಿ ಪಾಲಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಸೂಚನೆ ನೀಡಿರುವ ಬೆನ್ನಲ್ಲೇ ರಾಜ್ಯ ಪ್ರವಾಸದ ವೇಳೆ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಲಿದ್ದಾರೆಂಬ ಮಾತುಗಳು ಕೇಳಿಬರತೊಡಗಿವೆ. 
ಶೀಘ್ರದಲ್ಲಿಯೇ ರಾಜ್ಯ ಪ್ರವಾಸ ಕೈಗೊಳ್ಳಲಿರುವ ರಾಹುಲ್ ಗಾಂಧಿಯವರು ಜನವರಿ 20 ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದ ಪೀಠಕ್ಕೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ. 
ಗುಜರಾತ್ ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಿದ ಬೆನ್ನಲ್ಲೇ ರಾಹುಲ್ ಗಾಂಧಿಯವರು ರಾಜ್ಯದ ಎಲ್ಲಾ ಪ್ರಮುಖ ದೇಗುಲಗಳು ಹಾಗೂ ಮಠಗಳಿಗೆ ಭೇಟಿ ನೀಡಲಿದ್ದಾರೆ. 
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು, ನೆಹರು ಕುಟುಂಬಕ್ಕೆ ಹಿಂದಿನಿಂದಲೂ ಶೃಂಗೇರಿ ಮಠದೊಂದಿಗೆ ಬಾಂಧವ್ಯವಿದೆ. ಮಾಜಿ ಪ್ರಧಾನಮಂತ್ರಿಗಳಾದ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಕೂಡ ಕರ್ನಾಟಕ ಭೇಟಿ ಸಂದರ್ಭದಲ್ಲಿ ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದರು. ಇದೀಗ ರಾಹುಲ್ ಗಾಂಧಿ ಕೂಡ ಮಠಕ್ಕೆ ಭೇಟಿ ನೀಡುತ್ತಿದ್ದು, ಇದರಲ್ಲಿ ಅಂತಹ ವಿಶೇಷವೇನೂ ಇಲ್ಲ ಎಂದು ಹೇಳಿದ್ದಾರೆ. 
SCROLL FOR NEXT