ಸಂಗ್ರಹ ಚಿತ್ರ 
ರಾಜ್ಯ

ಉಚಿತ ಲ್ಯಾಪ್'ಟಾಪ್'ಗಳನ್ನು ಜಾಗರೂಕತೆಯಿಂದ ಬಳಸಿ: ವಿದ್ಯಾರ್ಥಿಗಳಿಗೆ ಸರ್ಕಾರ ಎಚ್ಚರಿಕೆ

ಉಚಿತ ಲ್ಯಾಪ್ ಟಾಪ್ ಯೋಜನೆಯಡಿಯಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಲ್ಯಾಪ್ ಟಾಪ್ ಗಳನ್ನು ದುರುಪಯೋಗ ಮಾಡಿಕೊಳ್ಳದೆ ಬಹಳ ಎಚ್ಚರಿಕೆಯಿಂದ ಬಳಸುವಂತೆ ವಿದ್ಯಾರ್ಥಿಗಳಿಗೆ ಸರ್ಕಾರ ಎಚ್ಚರಿಕೆ ನೀಡಿದೆ ಎಂದು...

ಬೆಂಗಳೂರು: ಉಚಿತ ಲ್ಯಾಪ್ ಟಾಪ್ ಯೋಜನೆಯಡಿಯಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಲ್ಯಾಪ್ ಟಾಪ್ ಗಳನ್ನು ದುರುಪಯೋಗ ಮಾಡಿಕೊಳ್ಳದೆ ಬಹಳ ಎಚ್ಚರಿಕೆಯಿಂದ ಬಳಸುವಂತೆ ವಿದ್ಯಾರ್ಥಿಗಳಿಗೆ ಸರ್ಕಾರ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ. 
ಸರ್ಕಾರ ನೀಡುತ್ತಿರುವ ಉಚಿತ ಲ್ಯಾಪ್ ಟಾಪ್ ಗಳನ್ನು ಪಡೆಯುವ ವಿದ್ಯಾರ್ಥಿಗಳು ಸರ್ಕಾರದ ನಿಯಮಗಳನ್ನು ಪಾಲನೆ ಮಾಡಬೇಕಿದ್ದು, ಆ ನಿಯಮಗಳನ್ನು ಕಾಲೇಜು ಶಿಕ್ಷಣ ಇಲಾಖೆ ತನ್ನ ವೆಬ್ ಸೈಟ್ ನಲ್ಲಿ ತಿಳಿಸಿದೆ. 
ಉಚಿತವಾಗಿ ಲ್ಯಾಪ್ ಟಾಪ್ ಗಳನ್ನು ಪಡೆದುಕೊಳ್ಳುವ ವಿದ್ಯಾರ್ಥಿಗಳು ಶೈಕ್ಷಣಿಕವಲ್ಲದ ಉದ್ದೇಶಗಳಿಗೆ ಬಳಕೆ ಮಾಡಬಾರದು. ಅಲ್ಲದೆ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಮತ್ತು ಮಾಹಿತಿ ತಂತ್ರಜ್ಞಾನ (ತಿದ್ದುಪಡಿ) ಕಾಯ್ದೆ 2008ರ ಬಗ್ಗೆ ನನಗೆ ಅರಿವಿದೆ. ಕಾಯ್ದೆ ವಿರುದ್ಧವಾಗಿ ಯಾವುದೇ ರೀತಿಯಲ್ಲಿ ನಡೆದುಕೊಳ್ಳುವುದಿಲ್ಲ. ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಂಡು ನಾನು ಯಾವುದೇ ವ್ಯಕ್ತಿಗೂ ಮೋಸ ಮಾಡುವುದಿಲ್ಲ. ರಾಷ್ಟ್ರದ ಭದ್ರತೆಗೆ ಯಾವುದೇ ರೀತಿಯಲ್ಲಿ ಧಕ್ಕೆ ತರುವುದಿಲ್ಲ ಎಂಬೆಲ್ಲಾ ನಿಯಮಗಳಿಗೆ ವಿದ್ಯಾರ್ಥಿಗಳಿಗೆ ಒಪ್ಪಿಗೆ ನೀಡಬೇಕಿದೆ. 
ಕಾಲೇಜು ಶಿಕ್ಷಕರು ಹಾಗೂ ಪ್ರಾಂಶುಪಾಲರೊಂದಿಗೆ ಚರ್ಚೆ ನಡೆಸಿದ ಬಳಿಕವೇ ನಾವು ಈ ರೀತಿಯ ಘೋಷಣೆ ಮಾಡಿದ್ದೇವೆ. ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಿದ ಬಳಿಕ ಅವರ ಮೇಲೆ ಕಣ್ಗಾವಲಿರಿಸುವುದು ಬಹಳ ಕಷ್ಟ. ಹೀಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಲ್ಯಾಪ್ ಟಾಪ್ ಪಡೆದುಕೊಳ್ಳುವ ವಿದ್ಯಾರ್ಥಿಗಳ ಬಳಿ ನಿಯಮಗಳ ಪತ್ರಕ್ಕೆ ಸಹಿ ಮಾಡಿಸಿಕೊಳ್ಳುತ್ತಿದ್ದೇವೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಯಾವುದೇ ವಿದ್ಯಾರ್ಥಿ ನಿಯಮವನ್ನು ಉಲ್ಲಂಘಿಸಿದ್ದೇ ಆದರೆ, ಅವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆಂದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT