ಬಳ್ಳಾರಿ: ಅದಾಯ ಮೀರಿದ ಆಸ್ತಿ ಗಳಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಅಧಿಕಾರಿಗಳ ವಿರುದ್ಧ ಮತ್ತೆ ಎಸಿಬಿ ಅಧಿಕಾರಿಗಳು ಮುಗಿಬಿದ್ದಿದ್ದು, ಗುರುವಾರ ಬೆಳಗ್ಗೆ ಗದಗ ಮತ್ತು ಬಳ್ಳಾರಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಕರ್ನಾಟಕ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ಇಂದು ಬೆಳಗ್ಗೆ ಬಳ್ಳಾರಿ ಮತ್ತು ಗದಗ ಜಿಲ್ಲೆಯಲ್ಲಿ ಕಾರ್ಯಾಚರಣೆಗಿಳಿದಿದ್ದು, ಬಳ್ಳಾರಿಯ ಉಪ ವಿಭಾಗಾಧಿಕಾರಿ ಶಿವಕುಮಾರ್ ಮತ್ತು ನರಗುಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಶೋಕ್ ಪಾಟೀಲ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಮೂಲಗಳ ಪ್ರಕಾರ ಆದಾಯ ಮೀರಿ ಆಸ್ತಿಗಳಿಸಿರುವ ದೂರಿನ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಎಸಿಬಿ ಡಿ.ಎಸ್.ಪಿ. ಮಂಜುನಾಥ್ ಅವರ ನೇತೃತ್ವದಲ್ಲಿ ಬಳ್ಳಾರಿ, ಗದಗ ಮತ್ತು ಚಿತ್ರದುರ್ಗದ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಬೆಳಗ್ಗೆಯಿಂದಲೇ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics