ಲೈಂಗಿಕ ಕಿರುಕುಳ ಆರೋಪ: ಇಂದಿರಾ ಕ್ಯಾಂಟೀನ್ ಮೇಲಾಧಿಕಾರಿ ವಿರುದ್ಧ ಮಹಿಳೆ ದೂರು
ಇಂದಿರಾ ಕ್ಯಾಂಟೀನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು, ಕ್ಯಾಂಟೀನ್ ಮೇಲಾಧಿಕಾರಿ ತನಗೆ...
ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು, ಕ್ಯಾಂಟೀನ್ ಮೇಲಾಧಿಕಾರಿ ತನಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಶನಿವಾರ ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಂಡೆಪಾಳ್ಯದ ಇಂದಿರಾ ಕ್ಯಾಂಟೀನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಗೆ ಅದೇ ಕ್ಯಾಂಟೀನ್ ಮೇಲಾಧಿಕಾರಿಯಾಗಿರುವ ಸತೀಶ್ ಎಂಬುವವರು ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಕ್ಯಾಂಟೀನ್ ನಲ್ಲಿ ಕ್ಯಾಷಿಯರ್ ಆಗಿ ಮುಂದುವರೆಯಬೇಕಾದರೆ ತನ್ನೊಂದಿಗೆ ಅಕ್ರಮ ಸಂಬಂಧ ಹೊಂದುವಂತೆ ಸತೀಶ್ ಒತ್ತಡ ಹೇರುತ್ತಿದ್ದಾರೆ. ಎಂದು ಮಹಿಳೆ ಆರೋಪಿಸಿದ್ದಾರೆ.