ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮತ್ತಷ್ಟು ಪೌಷ್ಟಿಕಾಂಶದೊಂದಿಗೆ ಬರಲಿದೆ ಬಿಸಿಯೂಟ: ಸಿರಿಧಾನ್ಯ ಸೇರ್ಪಡೆಗೆ ಸರ್ಕಾರ ಚಿಂತನೆ

ಸರ್ಕಾರಿ ಶಾಲೆಗಳಲ್ಲಿ ನೀಡಲಾಗುತ್ತಿರುವ ಬಿಸಿಯೂಟ ಮತ್ತಷ್ಟು ಸ್ವಾದಿಷ್ಟವಾಗಲಿದ್ದು, ಸಿರಿಧಾನ್ಯ ಸೇರ್ಪಡೆಗೊಳಿಸುವ ಕುರಿತಂತೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ...

ಸಂಗ್ರಹ ಚಿತ್ರ
Manjula VN
Updated On : 7 Jan 2018, 11:21 am
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ನೀಡಲಾಗುತ್ತಿರುವ ಬಿಸಿಯೂಟ ಮತ್ತಷ್ಟು ಸ್ವಾದಿಷ್ಟವಾಗಲಿದ್ದು, ಸಿರಿಧಾನ್ಯ ಸೇರ್ಪಡೆಗೊಳಿಸುವ ಕುರಿತಂತೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಸಾವಯವ ಹಾಗೂ ಸಿರಿಧಾನ್ಯಗಳನ್ನು ಪೌಷ್ಠಿಕ ಆಹಾವಾಗಿ ಬಳಸಿಕೊಳ್ಳುವ ಕುರಿತು ಜನಜಾಗೃತಿ ಮೂಡಿಸಲು ಸರ್ಕಾರ ಮುಂದಾಗಿದ್ದು, ಇದರ ಮೊದಲ ಹೆಜ್ಜೆಯಾಗಿ ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದಲ್ಲಿ ಸಿರಿಧಾನ್ಯ ಆಹಾರ ವಿತರಿಸುವ ಕುರಿತು ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. 
ಮಾರ್ಗದರ್ಶನದ ಆಧಾರದ ಮೇರೆಗೆ ಮೊದಲ ಹಂತವಾಗಿ ನಗದಲ್ಲಿರುವ ಸರ್ಕಾರಿ ಶಾಲೆಗಳ ಒಟ್ಟು 1000 ಮಕ್ಕಳಿಗೆ ಸಿರಿಧಾನ್ಯದಲ್ಲಿ ಮಾಡಿದ ಬಿಸಿಯೂಟವನ್ನು ನೀಡಲಾಗುತ್ತದೆ ಎನ್ನಲಾಗುತ್ತಿದೆ. ಜ.11 ರಂದು ರಾಜ್ಯ ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಲೆಯೊಂದರಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ. 

Advertisement

Advertisement

ಯೋಜನೆ ಜಾರಿಗೊಂಡ ಬಳಿಕ ಸಿರಿಧಾನ್ಯದಿಂದ ಮಾಡಿದ ಬಿಸಿಯೂಟವನ್ನು ಸೇವಿಸಿದ 1,000 ಮಕ್ಕಳ ಆರೋಗ್ಯ ಹಾಗೂ ಬೆಳವಣಿಗೆಗಳನ್ನು 6-8 ತಿಂಗಳ ಕಾಲ ಪರಿಶೀಲನೆ ನಡೆಸಲಿದ್ದು, ವರದಿಯ ಆಧಾರದ ಮೇಲೆ ರಾಜ್ಯ ಎಲ್ಲಾ ಸರ್ಕಾರಿ ಶಾಲೆಗಳಿಗೂ ಇದರ ಯೋಜನೆ ತಲುವಂತೆ ಮಾಡಲಾಗುತ್ತದೆ. 
ಪ್ರಸ್ತುತ ಸರ್ಕಾರಿ ಶಾಲೆಯ ಮಕ್ಕಳಿಗೆ ಅಕ್ಕಿ, ಗೋಧಿ, ಕಾಳುಗಳು ಹಾಗೂ ತರಕಾರಿಗಳಿಂದ ಮಾಡಿದ ಆಹಾರವನ್ನು ನೀಡಲಾಗುತ್ತಿದ್ದು, ಅಕ್ಕಿಯ ಬದಲಾಗಿ ಸಿರಿಧಾನ್ಯಗಳನ್ನು ಸೇರ್ಪಡೆಗೊಳಿಸಲಾಗುತ್ತದೆ. ಇದಲ್ಲದೆ ಬುಧವಾರದಂದು ಮಕ್ಕಳಿಗೆ ನೀಡಲಾಗುತ್ತಿರುವ ಸಿಹಿ ಪದಾರ್ಥವನ್ನೂ ಕೂಡ ಸಿರಿಧಾನ್ಯ ಬಳಸಿ ಮಾಡಿದ ಸಿಹಿಯನ್ನೇ ನೀಡಲು ಸರ್ಕಾರ ನಿರ್ಧರಿಸಿದೆ. 
ಸರ್ಕಾರದ ಬಿಸಿಯೂಟ ಯೋಜನೆಯೊಂದಿಗೆ ಕೈಜೋಡಿಸಿರುವ ಲಾಭರಹಿಸ ಸಂಸ್ಥೆ ಅಕ್ಷಯ ಪಾತ್ರೆ ಫೌಂಡೇಶನ್ ಈಗಾಗಲೇ ಹೈದರಾಬಾದ್ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಸಿರಿಧಾನ್ಯಗಳ ಬಿಸಿಯೂಟ ಯೋಜನೆಯನ್ನು ಜಾರಿಗೆ ತಂದಿದೆ. 
ಮಕ್ಕಳಲ್ಲಿ ಪೌಷ್ಠಿಕಾಂಶ ಕೊರತೆಗಳ ಸಮಸ್ಯೆಗಳನ್ನು ದೂರವಾಗಿಸಿರುವ ಗುರಿಯೊಂದಿಗೆ ಈ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ಇದರಂತೆ ಆಧುನಿತ ಆಹಾರ ಪದ್ಧತಿಯೊಂದಿಗೆ ಸಾಂಸ್ಕೃತಿಕ ಸಿರಿಧಾನ್ಯ ಪದ್ಧತಿಯನ್ನು ಸೇರ್ಪಡೆಗೊಳಿಸು ಮುಂದಾಗಿದೆ. ಸಿರಿಧಾನ್ಯದಲ್ಲಿ ಹೆಚ್ಚಿನ ಪೌಷ್ಟಿಕಾಂಶಗಳಿದ್ದು, ಇದು ಮಕ್ಕಳಲ್ಲಿ ಕಾಣಿಸುವ ಅಪೌಷ್ಠಿಕ ಸಮಸ್ಯೆಯನ್ನು ದೂರಾಗಿಸುತ್ತವೆ. ಎಂದು ಕೃಷಿ ಇಲಾಖೆ ಹಿರಿಯ ಅಧಿಕಾರಿ ಹೇಳಿದ್ದಾರೆ. 
ಸಾರ್ವಜನಿಕ ವಿತರಣಾ ವ್ಯವಸ್ಥೆ ಹಾಗೂ ಬಿಸಿಯೂಟ ಯೋಜನೆಯಲ್ಲಿ ಸಿರಿಧಾನ್ಯಗಳನ್ನು ಸೇರ್ಪಡೆಗೊಳಿಸುವಂತೆ ನೀತಿ ಆಯೋಗ ಕೂಡ ಈ ಹಿಂದೆ ಸಲಹೆಯನ್ನು ನೀಡಿತ್ತು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments