ಕಿಮ್ಸ್ 
ರಾಜ್ಯ

ಹುಬ್ಬಳ್ಳಿ: ಜೀವಂತ ವ್ಯಕ್ತಿಯನ್ನು 7 ಗಂಟೆ ಶವಾಗಾರದಲ್ಲಿಟ್ಟ ಕಿಮ್ಸ್ ವೈದ್ಯರು!

ವೈದ್ಯರ ಯಡವಟ್ಟಿನಿಂದಾಗಿ ಬದುಕಿದ್ದ ವ್ಯಕ್ತಿಯನ್ನು ಸತತ 7 ಗಂಟೆಗಳ ಕಾಲ ಶವಾಗಾರದಲ್ಲಿಟ್ಟ ಆಘಾತಕಾರಿ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ...

ಹುಬ್ಬಳ್ಳಿ: ವೈದ್ಯರ ಯಡವಟ್ಟಿನಿಂದಾಗಿ ಬದುಕಿದ್ದ ವ್ಯಕ್ತಿಯನ್ನು ಸತತ 7 ಗಂಟೆಗಳ ಕಾಲ ಶವಾಗಾರದಲ್ಲಿಟ್ಟ ಆಘಾತಕಾರಿ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ಬೇಜವಾಬ್ದಾರಿ ಖಂಡಿಸಿ ಯುವಕನ ಸಂಬಂಧಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ನಿನ್ನೆ ರಾತ್ರಿ ನೇಕಾರ ನಗರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕಿಡಾಗಿದ್ದ ಹುಬ್ಬಳ್ಳಿ ಆನಂದ ನಗರ ನಿವಾಸಿ ಪ್ರವೀಣ್ ಮೂಳೆ(23 ವರ್ಷ) ಎಂಬ ಯುವಕನನ್ನು ರಾತ್ರಿ 8ಗಂಟೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗಿನ ಜಾವ 3 ಗಂಟೆಗೆ ಪ್ರವೀಣ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು. ಬಳಿಕ ಆತನನ್ನು ಶವಗಾರಕ್ಕೆ ಸಾಗಿಸಲಾಗಿತ್ತು.
ಇಂದು ಬೆಳಗ್ಗೆ 10 ಗಂಟೆಗೆ ಮರಣೋತ್ತರ ಪರೀಕ್ಷೆ ನಡೆಸುವ ಸಂದರ್ಭದಲ್ಲಿ ಪ್ರವೀಣ್ ಬದುಕಿರುವುದು ತಿಳಿದು ಬಂದಿದೆ. ವಿಷಯ ತಿಳಿದ ಸಂಬಂಧಿಕರು ಪ್ರವೀಣ್‌ನನ್ನು ಖಾಸಗಿ ಆಸ್ಪತ್ರಗೆ‌ ಸಾಗಿಸಿದ್ದಾರೆ. ಆದರೆ ಖಾಸಗಿ ಆಸ್ಪತ್ರೆ ವೈದ್ಯರು ಕೆಲ‌ವು ನಿಮಿಷಗಳ‌ ಮುಂಚೆಯೇ ಪ್ರವೀಣ್ ಮೃತಪಟ್ಟಿದ್ದಾಗಿ ಹೇಳಿದ್ದಾರೆ.
ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿ, ವೈದ್ಯರ ಯಡವಟ್ಟಿಗೆ ಪ್ರವೀಣ್ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವೈದ್ಯರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ