ರಾಜ್ಯ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ತನಿಖೆಗೆ 3 ತಿಂಗಳು ಕಾಲಾವಕಾಶ ಕೇಳಿದ ಸಿಬಿಐ

Manjula VN
ನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು 3 ತಿಂಗಳು ಕಾಲಾವಕಾಶ ಬೇಕೆಂದು ಕೇಂದ್ರ ತನಿಖಾ ದಳ (ಸಿಬಿಐ) ನ್ಯಾಯಾಲಯದ ಮುಂದೆ ಸೋಮವಾರ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. 
ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ವಿರುದ್ಧ ಅ.26 ರಂದು ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿತ್ತು. 
ಬಳಿತ ಗಣಪತಿ ಮೃತದೇಹ ದೊರೆತಿದ್ದ ವಸತಿ ಗೃಹಕ್ಕೆ ಭೇಟಿ ನೀಡಿ ಪರಿಶೀನೆ ನಡೆಸಿದ್ದ ಅಧಿಕಾರಿಗಳು ಗಣಪತಿಯವರ ತಂದೆ, ತಾಯಿ ಹಾಗೂ ಸಹೋದರಿಯಿಂದ ಹೇಳಿಕೆಯನ್ನು ಪಡೆದುಕೊಂಡಿದ್ದರು. 
ಮಂಗಳೂರು ಐಜಿ ಕಚೇರಿಯಲ್ಲಿ ಡಿವೈಎಶ್ಪಿ ಆಗಿದ್ದ ಗಣಪತಿಯವರು 2016ರ ಜು.7 ರಂದು ಮಡಿಕೇರಿಯ ಲಾಡ್ಜ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದಕ್ಕೂ ಮುನ್ನ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದ ಅವರು, ಸಚಿವ ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್, ಪ್ರಣವ್ ಮೊಹಂತಿ ಅವರು ಕಿರುಕುಳ ನೀಡುತ್ತಿದ್ದಾರೆಂದು ದೂರಿದ್ದರು. 
ಬಳಿಕ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಕೆಲವೇ ತಿಂಗಳುಗಳಲ್ಲಿ ಸಿಐಡಿ ಮೂವರಿಗೆ ಕ್ಲೀನ್ ಚಿಟ್ ನೀಡಿತ್ತು. ಇದನ್ನು ಪ್ರಶ್ನಿಸಿದ್ದ ಗಣಪತಿ ಕುಟುಂಬ ಸುಪ್ರೀಂಕೋರ್ಟ್ ಮೊರೆ ಹೋಗಿ ಪ್ರಕರಣವನ್ನು ಸಿಬಿಐ ತನಿಖೆಗ ವಹಿಸಬೇಕೆಂದು ಕೋರಿತ್ತು. 
2017ರ ಸೆ.5 ರಂದು ಸುಪ್ರೀಂಕೋರ್ಟ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ಸುಪ್ರೀಂ ಆದೇಶದಂತೆ ಡಿಸೆಂಬರ್ ರೊಳಗಾಗಿ ಪ್ರಕರಣದ ತನಿಖೆ ಪೂರ್ಣಗೊಳ್ಳಬೇಕಿತ್ತು. ಪ್ರಕರಣದಲ್ಲಿ ಇನ್ನೂ ಸಾಕಷ್ಟು ಸಾಕ್ಷಿಗಳ ವಿಚಾರಣೆ ಹಾಗೂ ವಿಧಿ ವಿಜ್ಞಾನ ಪರೀಕ್ಷೆ ಬಾಕಿಯಿರುವುದರಿಂದ ಸಿಇಐ ಹೆಚ್ಚುವರಿ ಕಾಲಾವಕಾಶ ಕೋರಿತ್ತು.
SCROLL FOR NEXT