ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಕ್ಯಾಬ್ ಗಳ ಕನಿಷ್ಠ ದರ ನಿಗದಿ, ಟ್ಯಾಕ್ಸಿ ಸೇವೆ ಈಗ ಮತ್ತಷ್ಟು ದುಬಾರಿ

ರಾಜ್ಯ ಸರ್ಕಾರ ಸಿಲಿಕಾನ್ ಸಿಟಿಯ ಕ್ಯಾಬ್ ಗಳಿಗೆ ಕನಿಷ್ಠ ದರ ನಿಗದಿ ಮಾಡಿದ್ದು, ಇನ್ನುಮುಂದೆ ಟ್ಯಾಕ್ಸಿ ಸೇವೆ ಮತ್ತಷ್ಟು ....

ಸಾಂದರ್ಭಿಕ ಚಿತ್ರ
Lingaraj Badiger
Updated On : 10 Jan 2018, 3:17 am
ಬೆಂಗಳೂರು: ರಾಜ್ಯ ಸರ್ಕಾರ ಸಿಲಿಕಾನ್ ಸಿಟಿಯ ಕ್ಯಾಬ್ ಗಳಿಗೆ ಕನಿಷ್ಠ ದರ ನಿಗದಿ ಮಾಡಿದ್ದು, ಇನ್ನುಮುಂದೆ ಟ್ಯಾಕ್ಸಿ ಸೇವೆ ಮತ್ತಷ್ಟು ದುಬಾರಿಯಾಗಲಿದೆ.
ಸಣ್ಣ ಕಾರುಗಳಿಗೆ ಮೊದಲ ನಾಲ್ಕು ಕಿ.ಮೀ.ಗೆ ಕನಿಷ್ಠ ದರ 44 ರುಪಾಯಿ ಹಾಗೂ ಐಷಾರಾಮಿ ಕಾರುಗಳಿಗೆ ಮೊದಲ ನಾಲ್ಕು ಕಿ.ಮೀ.ಗೆ 80 ರುಪಾಯಿ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಟ್ಯಾಕ್ಸಿಗಳಿಗೆ ಕನಿಷ್ಠ ದರ ನಿಗದಿ ಪಡಿಸಿದ್ದರೂ ಟ್ಯಾಕ್ಸಿ ಕಂಪನಿಗಳು ಬಯಸಿದಷ್ಟು ಕಡಿಮೆ ದರ ವಿಧಿಸಬಹುದಾಗಿದೆ. ಆದರೆ ಕನಿಷ್ಠ ದರಕ್ಕಿಂತ ಹೆಚ್ಚು ವಿಧಿಸುವಂತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Advertisement

Advertisement

ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಭ್ಯವಾಗಿರುವ ನೂತನ ದರ ಪಟ್ಟಿಯ ಪ್ರಕಾರ, ಕಾರುಗಳ ಮಾರುಕಟ್ಟೆ ಬೆಲೆ ಆಧರಿಸಿ, ಪ್ರಯಾಣ ದರವನ್ನು ಎ, ಬಿ, ಸಿ ಮತ್ತು ಡಿ ನಾಲ್ಕು ಮಾದರಿಯ ದರಗಳನ್ನು ನಿಗದಿಪಡಿಸಲಾಗಿದೆ. ಸಣ್ಣ ಕಾರುಗಳು ಡಿ ದರ್ಜೆಯಲ್ಲಿ ಬರುತ್ತಿದ್ದು, ಅವುಗಳಿಗೆ ಕನಿಷ್ಠ 44 ರುಪಾಯಿ ಹಾಗೂ 16 ಲಕ್ಷ ರುಪಾಯಿಗೂ ಹೆಚ್ಚಿನ ಬೆಲೆಯ ಕಾರುಗಳಿಗೆ ಎ ದರ್ಜೆ ನೀಡಲಾಗಿದ್ದು, ಅದಕ್ಕೆ ಕನಿಷ್ಠ 80 ರುಪಾಯಿ ನಿಗದಿಪಡಿಸಲಾಗಿದೆ.
ಈ ಹಿಂದೆ 2013ರ ಜೂನ್ ನಲ್ಲಿ ದರ ಪರಿಷ್ಕರಣೆ ಮಾಡಲಾಗಿತ್ತು. ಸಣ್ಣ ಮಾದರಿಯ ಕಾರುಗಳ ಗರಿಷ್ಠ ಪ್ರಯಾಣ ದರವು 14.50 ರು. ಮತ್ತು ಮಧ್ಯಮ ಮಾದರಿ ಕಾರುಗಳಿಗೆ 19.50 ರು. ಪ್ರಯಾಣ ದರವಿತ್ತು.  ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು ಪ್ರಯಾಣ ದರ ಪರಿಷ್ಕರಣೆಗೆ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಈಗ ರಾಜ್ಯ ಸರ್ಕಾರ ದರ ಪರಿಷ್ಕರಣೆ ಮಾಡಿ, ಕನಿಷ್ಠ ದರ ನಿಗದಿಪಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments