ರಾಜ್ಯ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ರದ್ದು ಮಾಡಿಲ್ಲ: ಸಚಿವ ತನ್ವೀರ್ ಸೇಠ್ ಸ್ಪಷ್ಟನೆ

Manjula VN
ಬೆಂಗಳೂರು: ಪರೀಕ್ಷಾ ಕಾರ್ಯಕ್ಕೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ವರ್ಗಾವಣೆ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತಿದ್ದು, ಪ್ರಸ್ತುತ ಆರಂಭಗೊಂಡಿರುವ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳನ್ನು ರದ್ದು ಮಾಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹೇಳಿಕೆ ನೀಡಿದ್ದು, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿದೆ ಎಂದು ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಇದು ಶಿಕ್ಷಣ ಇಲಾಖೆಯ ವಿರುದ್ದ ಶಿಕ್ಷಕರ ಆಕ್ರೋಶ ಹೆಚ್ಚಾಗುವಂತೆ ಮಾಡಿತ್ತು. 
ಈ ಹಿನ್ನಲೆಯಲ್ಲಿ ನಿನ್ನೆ ಸ್ಪಷ್ಟನೆ ನೀಡಿರುವ ಸಚಿವರ, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಸರ್ಕಾರ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ತಪ್ಪಾದ ವರದಿಯಾಗಿದೆ. ಶಿಕ್ಷಕರ ವರ್ಗಾವಣೆ ಸಂಬಂಧ ಡಿ.29ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿತ್ತು. ಆನ್ ಲೈನ್ ಅರ್ಜಿ ಸಲ್ಲಿಕೆ ವೇಳೆ ತಂತ್ರಾಂಶದಲ್ಲಿ ಸಮಸ್ಯೆಗಳು ಉಂಟಾದ ಕೆಲವು ಗೊಂದಲಗಳಿಂದ ಶಿಕ್ಷಕರು ಮತ್ತು ಶಿಕ್ಷ ಸಂಘಟನೆಗಳು ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸುವಂತೆ ಮನವಿ ಮಾಡಿದ್ದವು. ಮನವಿ ಮೇರೆಗೆ ಮತ್ತೆ 10 ದಿನಗಳ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ. 
ಜ.20ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ಅರ್ಜಿ ಸಲ್ಲಿಕೆ ಬಳಿಕ ಫೆ.20 ರವರೆಗೆ ದಾಖಳೆಗಳ ಪರಿಶೀನೆ ನಡೆಸಲಾಗುವುದು. ನಂತರ ಒಂದು ತಿಂಗಳು ಕೌನ್ಸೆಲಿಂಗ್ ನಡೆಯಲಿದೆ ಮಾ.20 ರೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. 
SCROLL FOR NEXT