ರಾಜ್ಯ

ಶೀಘ್ರದಲ್ಲೇ ಪಿಎಫ್ಐ ಸಂಘಟನೆ ನಿಷೇಧ: ಕೇಂದ್ರ ಚಿಂತನೆ

Manjula VN
ಬೆಂಗಳೂರು: ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ಶೀಘ್ರದಲ್ಲಿಯೇ ನಿಷೇಧಗೊಳ್ಳಲಿದ್ದು, ಈ ಕುರಿತಂತೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಕೊಲೆ ಹಾಗೂ ಕೋಮುಗಲಭೆಯಂತಹ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಂಘಟನೆಯನ್ನು ನಿಷೇಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 
ಪಿಎಫ್ಐ ಸಂಘಟನೆ ಕುರಿತಂತೆ ಈಗಾಗಲೇ ಗೃಹ ವ್ಯವಹಾರಗಳ ಸಚಿವಾಲಯ ಎಲ್ಲಾ ಅಧಿಕಾರಿಗಳು, ರಾಷ್ಟ್ರೀಯ ತನಿಖಾ ತಂಡದೊಂದಿಗೆ ಮಾತುಕತೆ ನಡೆಸಿದ್ದು, ಮಾಹಿತಿಗಳನ್ನು ಕಲೆ ಹಾಕಿದೆ. ಈ ಹಿನ್ನಲೆಯಲ್ಲಿ ಸಂಘಟನೆ ನಿಷೇಧ ಕುರಿತು ಶೀಘ್ರದಲ್ಲೇ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ. 
ಕೇರಳ ಹಾಗೂ ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಗೃಹ ವ್ಯವಹಾರಗಳ ಸಚಿವಾಲಯ ನಿರ್ಧಾರ ಕೈಗೊಳ್ಳಲು ನಿರ್ಧರಿಸಿದೆ ಎನ್ನಲಾಗುತ್ತಿದೆ. 
ಕೇರಳ ಹಾಗೂ ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣದಲ್ಲಿ ಪಿಎಫ್ಐ ಸಂಘಟನೆಗೆ ಸೇರಿದ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಇನ್ನು ಕೆಲವರು ಜನರ ಬಲಪಂಥೀಯರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ಪ್ರಕರಗಳಲ್ಲಿ ಬಂಧನಕ್ಕೊಳಪಗಾಗಿದ್ದಾರೆ. ಅಲ್ಲದೆ, ಪಿಎಫ್ಐ ಸದಸ್ಯರ ವಿರುದ್ಧ ಕೋಮು ಗಲಭೆ ಸೃಷ್ಟಿಸಿರುವ ಹಲವು ಪ್ರಕರಣಗಳು ಕೂಡ ದಾಖಲಾಗಿವೆ. ಎಲ್ಲಾ ಅಂಶಗಳನ್ನು ಗಮನಿಸಿ ಸರ್ಕಾರ ನಿರ್ಧಾರ ಕೈಗೊಳ್ಳುತ್ತಿದೆ ೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಪಿಎಫ್ಐ ವಿರುದ್ಧ ಈ ವರೆಗೂ ದಾಖಲಾಗಿರುವ ಎಲ್ಲಾ ಪ್ರಕರಣಗಳ ವರದಿಯನ್ನು ಈಗಾಗಲೇ ಅಧಿಕಾರಿಗಳು ಸಚಿವಾಲಯಕ್ಕೆ ಸಲ್ಲಿಸಿದ್ದು, ಶೀಘ್ರದಲ್ಲೇ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂತು ತಿಳಿಸಿದ್ದಾರೆ. 
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿರುವ ಸಂದರ್ಭದಲ್ಲಿ ಹಿಂದೂಗಳ ಮನವೊಲಿಸಿ ಮತಗಳನ್ನು ಪಡೆಯಲು ಪಿಎಫ್ಐ ಸಂಘಟನೆ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರುತ್ತದೆ ಎಂಬ ಮಾತುಗಳು ಕೇಳಿಬರತೊಡಗಿವೆ. 
SCROLL FOR NEXT