ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ: ಶಾಲೆಗಳ ಪ್ರಾರ್ಥನಾ ಸಮಯ ಕಡಿತಕ್ಕೆ ಸರ್ಕಾರ ಚಿಂತನೆ

ರಾಜ್ಯದ ಸರ್ಕಾರಿ ಶಾಲೆಗಳ ಬೆಳಗಿನ ಪ್ರಾರ್ಥನಾ ಸಮಯವನ್ನು ಕಡಿತಗೊಳಿಸಲು ಪ್ರಾಥಮಿಕ ಮತ್ತು ಫ್ರೌಢಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ...

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಬೆಳಗಿನ ಪ್ರಾರ್ಥನಾ ಸಮಯವನ್ನು ಕಡಿತಗೊಳಿಸಲು ಪ್ರಾಥಮಿಕ ಮತ್ತು ಫ್ರೌಢಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
ಶಾಲೆಗಳಲ್ಲಿ ಶೈಕ್ಷಣಿಕವಲ್ಲದ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ವ್ಯರ್ಥವಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಿನ ಪ್ರಾರ್ಥನಾ ಸಮಯವನ್ನು 20 ನಿಮಿಷಕ್ಕೆ ನಿಗದಿ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ. 
ಇಲಾಖೆ ಈ ಹಿಂದೆ ಈ ಬಗ್ಗೆ ಸಮೀಕ್ಷೆಯೊಂದನ್ನು ನಡೆಸಿದ್ದು, ಸಮೀಕ್ಷೆಯ ವರದಿಯಲ್ಲಿ ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ, ಕ್ಷೀರ ಭಾಗ್ಯ ಅಡಿಯಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಹಾಲು ಹಾಗೂ ಬಿಸಿಯೂಟದಂತಹ ಶೈಕ್ಷಣಿಕವಲ್ಲದ ಚಟುವಟಿಕೆಗಳು ವರ್ಷಕ್ಕೆ 30-40 ಗಂಟೆಗಳು ವ್ಯರ್ಥವಾಗುತ್ತಿದೆ ಎಂದು ತಿಳಿಸಿದೆ. ಈ ಹಿನ್ನಲೆಯಲ್ಲಿ ಪ್ರಾರ್ಥನಾ ಸಮಯವನ್ನು 20 ನಿಮಿಷಕ್ಕೆ ಕಡಿತಗೊಳಿಸಲು ಸರ್ಕಾರ ಚಿಂತಿಸುತ್ತಿದೆ ಎಂದು ತಿಳಿದುಬಂದಿದೆ. 
ಬೆಳಗಿನ ಪ್ರಾರ್ಥನೆ ಸಂದರ್ಭದಲ್ಲಿ ಮಕ್ಕಳು ನಾಡಗೀತೆ ಹಾಗೂ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಾಗಿದೆ. ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳು ಪ್ರತಿನಿತ್ಯ ಪ್ರಾರ್ಥನೆಗೆ 40 ನಿಮಿಷಗಳನ್ನು ತೆಗೆದುಕೊಳ್ಳುತ್ತಿದೆ. ಹಲವಾರು ಶಾಲೆಗಳು ಇದರ ಜೊತೆಗೆ ಕೆಲ ಭಕ್ತಿಗೀತೆಗಳನ್ನು ಹಾಡಿಸುತ್ತಿದೆ. ಹೀಗಾಗಿ ಪ್ರಾರ್ಥನೆಗೆ ಸಾಕಷ್ಟು ಸಮಯ ವ್ಯರ್ಥವಾಗುತ್ತಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿ ಹೇಳಿದ್ದಾರೆ. 
ಸರ್ಕಾರಿ ಶಾಲೆಗಳ ಶಿಕ್ಷಕರು ವರ್ಷಕ್ಕೆ 850-900 ಗಂಟೆಗಳ ಕಾಲ ಮಕ್ಕಳಿಗೆ ಬೋಧನೆ ಮಾಡುತ್ತಾರೆ. ಖಾಸಗಿ ಶಾಲೆಗಳಿಗೆ ಹೋಲಿಕೆ ಮಾಡಿದರೆ ಇದು ಬಹಳ ಕಡಿಮೆ. ಖಾಸಗಿ ಶಾಲೆಗಳಲ್ಲಿ ಶಿಕ್ಷರು 1,200 ಗಂಟೆಗಳ ಕಾಲ ಬೋಧನೆ ಮಾಡುತ್ತಾರೆ. ಇದರಿಂದ ಶಿಕ್ಷಣದ ಮೌಲ್ಯದಲ್ಲಿ ವ್ಯತ್ಯಾಸಗಳು ಕಂಡುಬರುತ್ತಿವೆ. ಪ್ರಾರ್ಥನಾ ಸಮಯವನ್ನು ಸರ್ಕಾರ ನಿರ್ಧರಿಸಿದ್ದೇ ಆದರೆ, ಬಳಿಕ ನಾವು ಎಲ್ಲಾ ಶಾಲೆಗಳಿರೂ ಸೂಚನೆಗಳನ್ನು ನೀಡಿತ್ತೇವೆಂದು ಅಧಿಕಾರಿ ತಿಳಿಸಿದ್ದಾರೆ. 
ಕರ್ನಾಟಕ ರಾಜ್ಯ ಪ್ರೈಮರಿ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್ ಗುರಿಕರ್ ಮಾತನಾಡಿ, ಸರ್ಕಾರದ ಈ ನಿರ್ಧಾರ ಯಾವುದೇ ರೀತಿಯ ಸಹಾಯವನ್ನು ಮಾಡುವುದಿಲ್ಲ. ಪ್ರಾರ್ಥನಾ ಸಮಯ ಕಡಿತಗೊಳಿಸುವ ಬದಲು ಸರ್ಕಾರ ಶಿಕ್ಷಕರಿಂದ ಮಾಡಿಸಲಾಗುತ್ತಿರುವ ಶೈಕ್ಷಣಿಕವಲ್ಲದ ಚಟುವಟಿಕೆಗಳಾದ ಚುನಾವಣಾ ಕಾರ್ಯ, ಸಮೀಕ್ಷೆಗಳನ್ನು ನಿಲ್ಲಿಸಬೇಕೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!