ರಾಜ್ಯ

ಗವಿ ಗಂಗಾಧರೇಶ್ವರನ ಪಾದ ಸ್ಪರ್ಶಿಸಿದ ಸೂರ್ಯದೇವ!

Vishwanath S
ಬೆಂಗಳೂರು: ಮಕರ ಸಂಕ್ರಮಣದ ದಿನವಾದ ಇಂದು ಸಂಜೆ ಗವಿಪುರಂನ ಗವಿ ಗಂಗಾಧರೇಶ್ವರ ದೇಗುಲದ ಶಿವಲಿಂಗವನ್ನು ಸೂರ್ಯದೇವ ಸ್ಪರ್ಶಿಸಿದ ಅಪೂರ್ವ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡರು. 
ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಬೆಳಕಿನ ಚಮತ್ಕಾರವೊಂದು ಕಣ್ಣಿಗೆ ಹಬ್ಬವಾಗುತ್ತದೆ. ಶಿವನೂ ಸೂರ್ಯನೂ ಒಂದೇ ಕಡೆ ಮುಖಾಮುಖಿಯಾಗುವ ಅಪೂರ್ವ ಕ್ಷಣ. ಸೂರ್ಯನು ಗಂಗಾಧರನ ಪಾದ ಸ್ಫರ್ಶಿಸಿ ಪಥ ಬದಲಿಸುತ್ತಾನೆ ಎಂಬ ನಂಬಿಕೆ ಭಕ್ತರಲ್ಲಿದೆ.
ಮಕರ ಸಂಕ್ರಾಂತ್ರಿಯ ಮೊದಲು 10 ದಿನ ಸೂರ್ಯ ದಕ್ಷಿಣ ಪಥದಿಂದ ಉತ್ತರ ಪಥಕ್ಕೆ ಚಲಿಸುವ ಎಲ್ಲಾ ಲಕ್ಷಣಗಳು ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಕಾಣಿಸುತ್ತದೆ. ಆದರೆ ಮಕರ ಸಂಕ್ರಾಂತಿಯಂದು ಸೂರ್ಯಸ್ತ ಸಮಯದಲ್ಲಿ ಸೂರ್ಯನ ಕಿರಣಗಳು ದೇವಸ್ಥಾನದ ದಕ್ಷಿಣ ಕಿಟಕಿಯ ಮೂಲಕ ಹಾದು. ನಂದಿಯ ಕೋಡುಗಳ ಮಧ್ಯಭಾಗದಿಂದ ಶಿವನ ಪಾದವನ್ನು ನೇರವಾಗಿ ಸ್ಪರ್ಶಿಸುವ ಮೂಲಕ ಸಂಪೂರ್ಣವಾಗಿ ಪಥ ಬದಲಿಸುವುದನ್ನು ಕಾಣಬಹುದು. 
ಅಪಾರ ಸಂಖ್ಯೆಯಲ್ಲಿ ಭಕ್ತರು ಗವಿ ಗಂಗಾಧರೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆಗಳಲ್ಲಿ ಭಾಗವಹಿಸಿ ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು. 
SCROLL FOR NEXT