ಸಾಮಾಜಿಕ ಮಾದ್ಯಮದಲ್ಲಿ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿಗೆ ಬೆದರಿಕೆ ಹಾಕಿದ್ದ ಯುವಕನ ಬಂಧನ 
ರಾಜ್ಯ

ಮಂಗಳೂರು: ಸಾಮಾಜಿಕ ಮಾದ್ಯಮದಲ್ಲಿ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿಗೆ ಬೆದರಿಕೆ ಹಾಕಿದ್ದ ಯುವಕನ ಬಂಧನ

ಸಾಮಾಜಿಕ ತಾಣದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಬೆದರಿಕೆ ಹಾಕಿದ್ದ ಯುವಕನನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ.

ಮಂಗಳೂರು: ಸಾಮಾಜಿಕ ತಾಣದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಬೆದರಿಕೆ ಹಾಕಿದ್ದ ಯುವಕನನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಹರೀಶ್ ದೇವಾಡಿಗ ಎಂದು ಗುರುತಿಸಲಾಗಿದ್ದು ಈತ ಬೆಳ್ತಂಗಡಿಯ ಕಕ್ಕಿಂಜೆ ನಿವಾಸಿಯಾಗಿದ್ದಾನೆ. ಅನ್ಯ ಕೋಮಿನ ಯುವಕರೊಡನೆ ಫೋಟೋ ತೆಗೆಸಿಕೊಂಡಿದ್ದ ವಿದ್ಯಾರ್ಥಿನಿ,  ಎಸ್‍ಎಫ್‍ಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮಾಧುರಿ ಬೋಳಾರ ಗೆ ಸಾಮಾಜಿಕ ತಾಣದ ಮೂಲಕ ಬೆದರಿಕೆ ಹಾಕಿದ್ದ.
ಈ ಸಂಬಂಧ ತನಿಖೆ ನಡೆಸಿದ ಪೋಲೀಸರು ಮಂಗಳೂರಿನ ಪಂಪ್ ವೆಲ್‌ ಬಳಿ ಶ್ರೀಹರಿ ಅಲಿಯಾಸ್‌ ಹರೀಶ್‌ ದೇವಾಡಿಗ ಅಲಿಯಾಸ್ ಕಕ್ಕಿಂಜೆ ಹರೀಶ್‌ ನನ್ನು ಬಂಧಿಸಿದ್ದಾರೆ.ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ನ್ನು ವಶಕ್ಕೆ ಪಡೆಯಲಾಗಿದ್ದು ಹರೀಶ್ ನನ್ನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮಾಧುರಿ ಎಸ್‌ಎಫ್‌‌ಐ ಸಂಘಟನೆಯ ಕೆಲಸದ ನಿಮಿತ್ತ ತೆರಳಿದ್ದಾಗ ಸಂಘಟನೆಯ ಇತರರೊಡನೆ ತೆಗೆಸಿಕೊಂಡಿದ್ದ ಚಿತ್ರವನ್ನು ಫೇಸ್ ಬುಕ್ ಗೆ ಹಾಕಿದ್ದರು. ಇದನ್ನು ಡೌನ್ ಲೋಡ್ ಮಾಡಿಕೊಂಡಿದ್ದ ಕೆಲವರು ಚಿತ್ರದ ಜತೆಗೆ ಬೆದರಿಕೆ ಸಂದೇಶಗಳನ್ನು ಕಳಿಸುತ್ತಿದ್ದಾರೆ ಎಂದು ಆಕೆ ಪೋಲೀಸರಿಗೆ ದೂರಿತ್ತಿದ್ದಾರೆ.ಈ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೋಲೀಸರು ಹರೀಶನನ್ನು ಬಂಧಿಸಿದ್ದು ಇತರೆ ಕೆಲ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ