ಶಿವಮೊಗ್ಗ: ಬಿಜೆಪಿಯ ಬೇಡಿಕೆಯ ಹೊರತಾಗಿಯೂ, ಯಾವುದೇ ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
"ಪಿಎಫ್ಐ ಯನ್ನು ನಿಷೇಧಿಸಲು ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ, ಆರ್ ಎಸ್ ಎಸ್, ವಿಎಚ್ ಪಿ, ಭಜರಂಗ ದಳ, ಶ್ರೀರಾಮ ಸೇನೆ ಸಹ ಪಿಎಫ್ಐ ನಂತೆಯೇ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ನಿರ್ಧರಿಸಿದ್ದಾದರೆ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಎಲ್ಲರಿಗೂ ಒಂದೇ ಕಾನೂನು ಅನ್ವಯಿಸಲು ಸಾಧ್ಯ." ಹೊಸನಗರದ ರಿಪ್ಪನ್ ಪೇಟೆಯಲ್ಲಿ ಸುದ್ದಿಗಾರರೊಡನೆ ಮಾತನಾಡಿದ ಗೃಹಸಚಿವರು ಸದ್ಯ ಪರಿಸ್ಥಿತಿಯಲ್ಲಿ ರಾಜ್ಯದ ಯಾವ ಸಂಘಟನೆಗಳನ್ನು ನಿಷೇಧಿಸುವುದಿಲ್ಲ ಎಂದರು.
"ರಾಜಕೀಯ ಉದ್ದೇಶದಿಂದ ಬಿಜೆಪಿ ಮತ್ತು ಇತರ ಪಕ್ಷಗಳು ಇಂತಹ ಆರೋಪಗಳನ್ನು ಮಾಡುತ್ತಿದೆ. ಈ ಸಂಬಂಧ ನಾನು ಮುಖ್ಯಮಂತ್ರಿಯೊಂದಿಗೆ ಚರ್ಚಿಸುತ್ತೇನೆ. ಯಾವುದೇ ರೀತಿಯ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆ ನಾವು ಮತ್ತೆ ನಿರ್ಧರಿಅಸಲಿದ್ದೇವೆ." ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪ್ರಕ್ಷುಬ್ದ ಪರಿಸ್ಥಿತಿ ಕುರಿತಂತೆ ಮಾತನಾಡಿದ ಗೃಹ ಸಚಿವ ರೆಡ್ದಿ "ಚುನಾವಣೆ ಸಮೀಪಿಸುತ್ತಿರುವಾಗ, ಅನೇಕ ರಾಜಕೀಯ ಪಕ್ಷಗಳು ಇಂತಹ ಘಟನೆಗಳನ್ನು ತಮ್ಮ ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತವೆ. ಜನರು ಈ ರಾಜಕೀಯ ಪಕ್ಷಗಳ ಚಟುವಟಿಕೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ಅವರು ಖಂಡಿತವಾಗಿ ಆ ಪಕ್ಷಗಳಿಗೆ ತಕ್ಕ ಪಾಠ ಕಲಿಸುತ್ತಾರೆ." ಸಚಿವರು ಹೇಳಿದ್ದಾರೆ.
ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ, ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗವಹಿಸುವ ಸಂಘಟನೆಗಳನ್ನು ನಿಷೇಧ ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯಾವ ಕ್ರಮ ತೆಗೆದುಕೊಳ್ಳುವ ಮುನ್ನ ಕೇಂದ್ರದ ಆನುಮತಿ ಆಗತ್ಯ. ಯಡಿಯೂರಪ್ಪ ಹೇಳಿದ ಮಾತ್ರಕ್ಕೆ ನಾವು ಯಾವ ಸಂಘಟನೆಗಳನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.