ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜ್ಯ

2018-19 ರಾಜ್ಯ ಬಜೆಟ್: ಜ.18ರಿಂದ ಪೂರ್ವ ಬಜೆಟ್ ಸಮಾಲೋಚನೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ

2018-19ನೇ ಸಾಲಿನ ಬಜೆಟ್ ಮಂಡನೆಗೆ ಸಿದ್ಧತೆಗಳನ್ನು ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜ.18ರಿಂದ ವಿವಿಧ ಇಲಾಖೆಗಳಿಗೆ ಸೇರಿದ ಹಿರಿಯ ಅಧಿಕಾರಿಗಳು ಹಾಗೂ ಹಲವು ಸಂಘಟನೆಗಳೊಂದಿಗೆ ಪೂರ್ವ ಬಜೆಟ್ ಸಮಾಲೋಚನೆ ನಡೆಸಲಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಬೆಂಗಳೂರು: 2018-19ನೇ ಸಾಲಿನ ಬಜೆಟ್ ಮಂಡನೆಗೆ ಸಿದ್ಧತೆಗಳನ್ನು ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜ.18ರಿಂದ ವಿವಿಧ ಇಲಾಖೆಗಳಿಗೆ ಸೇರಿದ ಹಿರಿಯ ಅಧಿಕಾರಿಗಳು ಹಾಗೂ ಹಲವು ಸಂಘಟನೆಗಳೊಂದಿಗೆ ಪೂರ್ವ ಬಜೆಟ್ ಸಮಾಲೋಚನೆ ನಡೆಸಲಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ರೈತಪರ ಸಂಘಟನೆಗಳು, ದಲಿತರು, ಅಲ್ಪಸಂಖ್ಯಾತರು ಹಾಗೂ ಇನ್ನಿತರೆ ಸಮುದಾಯಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಮಾಲೋಚನೆ ನಡೆಸಲಿದ್ದು, ವ್ಯಾಪಾರ ಹಾಗೂ ಉದ್ಯಮ ಸಂಘಗಳ ಅಭಿಪ್ರಾಯ ಹಾಗೂ ಸಲಹೆಗಳನ್ನು ಪಡೆಯಲಿದ್ದಾರೆ. 
ಜನವರಿ. 18 ರಿಂದ ರೈತ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಲೋಚನೆಯನ್ನು ಆರಂಭಿಸಲಿದ್ದು, ಫೆ.5 ರಂದು ಅಂತಿಮವಾಗಿ ಆದಾಯ ಇಲಾಖೆ, ಸಾರಿಗೆ, ವಾಣಿಜ್ಯ, ಗಣಿ ಮತ್ತು ಭೂ ವಿಜ್ಞಾನ, ಅಂಚೆ ಚೀಟಿ ಮತ್ತು ನೋಂದಣಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಲಿದ್ದಾರೆಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ