ಸಾಂದರ್ಭಿಕ ಚಿತ್ರ 
ರಾಜ್ಯ

ಮಹದಾಯಿ ವಿವಾದ: ಬೆಳಗಾವಿ ಬಸ್ ಸಂಚಾರ ಸ್ಥಗಿತಗೊಳಿಸಿದ ಗೋವಾ ಸರ್ಕಾರ

ಮಹದಾಯಿ ವಿವಾದ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಗೋವಾ ಸರ್ಕಾರ ಬೆಳಗಾವಿಗೆ ಆಗಮಿಸಬೇಕಿದ್ದ ಬಸ್'ಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ...

ಬೆಳಗಾವಿ: ಮಹದಾಯಿ ವಿವಾದ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಗೋವಾ ಸರ್ಕಾರ ಬೆಳಗಾವಿಗೆ ಆಗಮಿಸಬೇಕಿದ್ದ ಬಸ್'ಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ. 
ಬೆಳಗಾವಿಯ ಕಣಕುಂಬಿಯಲ್ಲಿ ಮಹದಾಯಿ ಯೋಜನೆ ಕಾಮಗಾರಿ ಪರಿಶೀಲನೆ ನಡೆಸುವ ಸಲುವಾಗಿ ಆಗಮಿಸಿದ್ದ ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲ್ಯೇಕರ್ ಅವರು, ಕನ್ನಡಿಗರು ಹರಾಮಿಗಳು. ಅವರು ಏನು ಬೇಕಾದರೂ ಮಾಡುತ್ತಾರೆ. ಮಹದಾಯಿ ವಿವಾದವನ್ನು ನ್ಯಾಯಾಧೀಕರಣದಲ್ಲಿ ಬಗೆಹರಿಸಿಕೊಳ್ಳುತ್ತೇವೆ. ಈ ಸಂಬಂಧ ದಾಖಲೆಗಳನ್ನು ನ್ಯಾಯಾಧೀಕರಣಕ್ಕೆ ಸಲ್ಲಿಸುತ್ತೇವೆಂದು ಹೇಳಿಕೆ ನೀಡಿದ್ದರು. 
ಗೋವಾ ಸಚಿವರ ಈ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶಗಳು ವ್ಯಕ್ತವಾಗತೊಡಗಿದವು. ರಾಜಕಾರಣಿಗಳು ಹಾಗೂ ಕನ್ನಡಪರ ಸಂಘಟನೆಗಳು ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತಿವೆ. 
ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗೋವಾ ಸರ್ಕಾರ ರಾಜ್ಯಕ್ಕೆ ಆಗಮಿಸಬೇಕಿದ್ದ ಬಸ್ ಸಂಚಾರಗಳನ್ನು ಅನಧಿಕೃತವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ. 
ಬಸ್ ಸಂಚಾರ ಸ್ಥಗಿತ ಹಿನ್ನಲೆಯಲ್ಲಿ ಮಾಹಿತಿ ನೀಡಿರುವ ಬೆಳಗಾವಿ ವಿಭಾಗೀಯ ನಿಯಂತ್ರಕ ಕಚೇರಿ, ಗೋವಾ ಸರ್ಕಾರದೊಂದಿಗೆ ಅಧಿಕೃತವಾಗಿ ಯಾವುದೇ ರೀತಿಯ ಮಾತುಕತೆಗಳು ನಡೆದಿಲ್ಲ. ಆದರೆ, ಬೆಳಗಾವಿಗೆ ಎಂದಿನಂತೆ ಬರುತ್ತಿದ್ದ ಬಸ್ ಗಳು ಸೋಮವಾರ ಬಂದಿಲ್ಲ. ಕರ್ನಾಟಕದ ಕಡೆಯಿಂದ ಯಾವುದೇ ಬೆದರಿಕೆಗಳು ಹಾಗೂ ಅಹಿತಕರ ಘಟನೆಗಳು ಇಲ್ಲದಿದ್ದರೂ ಬಸ್ ಸಂಚಾರ ಸ್ಥಗಿತಗೊಳಿಸಿರುವುದು ಆಶ್ಚರ್ಯವನ್ನು ತಂದಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT