ಬೆಂಗಳೂರು: ಮಹದಾಯಿ ವಿವಾದ ಸಂಬಂಧ ಕನ್ನಡಿಗರನ್ನು ಹರಾಮಿಗಳು ಎಂದು ಹೇಳಿದ್ದ ಗೋವಾ ಜಲಸಂಪನ್ಮೂಲ ಸಚಿವ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗೋವಾ ಸಚಿವ ವಿನೋದ ಪಾಲ್ಯೇಕರ್ ಅವರು ಕರ್ನಾಟಕದ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದಾರೆ, ಮಹಾದಾಯಿ ವಿವಾದ ಸಂಬಂಧ ಕರ್ನಾಟಕ ಜನರಿಗೆ ಹಣವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ. ಈ ರೀತಿಯ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಗೋವಾ ಸಚಿವರು ಬಾಲಿಶ ಹಾಗೂ ಬೇಜವಾಬ್ದಾರಿಯುತವಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಹೇಳಿದ್ದಾರೆ.
ಬಳಿಸ ಮಾತನಾಡಿರುವ ಕಾಂಗ್ರೆಸ್ ಸಂಸದ ಬಿಕೆ. ಹರಿಪ್ರಸಾದ್ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಮೋದಿ ಸರ್ಕಾರ ಮಹದಾಯಿ ವಿವಾದ ಸಂಬಂಧ ಕೀಳು ಮಟ್ಟದ ರಾಜಕೀಯವನ್ನು ಮಾಡುತ್ತಿದೆ. ಮಹದಾಯಿ ವಿವಾದದಲ್ಲಿ ಮೋದಿಯವರು ತಾರತಮ್ಯ ಮಾಡುತ್ತಿದ್ದಾರೆ. ನರ್ಮದಾ ನದಿ ನೀರು ಕುರಿತಂತೆ ಮಧ್ಯಪ್ರದೇಶದಲ್ಲಿ ಮಾಡಿದ ರಾಜಕೀಯವನ್ನು ಮಹದಾಯಿ ವಿಚಾರದಲ್ಲಿ ಪ್ರಧಾನಿ ಮೋದಿ ಮಾಡುತ್ತಿದ್ದಾರೆ. ಮೋದಿ ಸರ್ಕಾರ ಆಸಕ್ತಿ ತೋರಿಸಿದ್ದೇ ಆದರೆ, ವಿವಾದ ಖಂಡಿತವಾಗಿಯೂ ಇತ್ಯರ್ಥಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.