ಬೆಂಗಳೂರು: ರಾಜ್ಯದಲ್ಲಿ ನಾಲ್ಕೂವರೆ ವರ್ಷಗಳಿಂದ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಸೇವಾ ಅವಧಿಯಲ್ಲಿ ಅಭಿಮಾನಿಗಳು ನೀಡಿದ್ದ ಬೆಳ್ಳಿ ಆಭರಣಗಳ ಉಡುಗೊರೆಗಳನ್ನು ಚಾಮರಾಜನಗರ ಜಿಲ್ಲೆಯಲ್ಲಿರುವ ಮಲೈ ಮಹದೇಶ್ವರ ದೇಗುಲಕ್ಕೆ ನೀಡಲು ನಿರ್ಧರಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಅವರಿಗೆ ಬೆಳ್ಳಿಯ ಗದೆ, ಕಿರೀಟ ಸೇರಿದಂತಚೆ ಹಲವು ಬೆಳ್ಳಿಯ ಆಭರಣಗಳು ಉಡುಗೊರೆಯಾಗಿ ಬಂದಿವೆ. ಈ ಆಭರಣಗಳನ್ನು ಮಹದೇಶ್ವರನಿಗೆ ನೀಡಲು ಮುಂದಾಗಿರುವ ಸಿದ್ದರಾಮಯ್ಯ ಅವರು, ಅದರಿಂದ ಬೆಳ್ಳಿಯ ರಥ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಅವರ ಈ ನಿರ್ಧಾರ ಪ್ರತಿಪಕ್ಷ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದಂತಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಸಿದ್ದರಾಮಯ್ಯ ಅವರ ಈ ನಿರ್ಧಾರ ಪಕ್ಷಕ್ಕೆ ಮತ್ತಷ್ಟು ಬಲ ನೀಡಿದಂತಾಗಿದೆ.