ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಫೆ.10ಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ರಾಜ್ಯಕ್ಕೆ ಆಗಮಿಸುತ್ತಿದ್ದು, 3 ದಿನಗಳ ಕಾಲ ಪ್ರವಾಸ ಮಾಡಲಿದ್ದಾರೆಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಮಂಗಳವಾರ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿರು ಅವರು, ಫೆ.10 ರಿಂದ 12ರವರೆಗೆ ಮೂರು ದಿನಗಳ ಕಾಲ ರಾಹುಲ್ ಗಾಂಧಿಯವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯ ಹಿರಿಯ ಕಾಂಗ್ರೆಸ್ ನಾಯಕರು ರಾಹುಲ್ ಅವರಿಗೆ ಸಾಥ್ ನೀಡಲಿದ್ದು, ಪ್ರವಾಸದ ವೇಳೆ ರಾಹುಲ್ ಅವರು ರೋಡ್ ಶೋ, ಸಂವಾದ, ರೈತರು, ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳಲ್ಲಿರುವವರ ಜೊತೆ ಸಮಾಲೋಚನೆ ನಡೆಸಲಿದ್ದಾರೆಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಪರಮೇಶ್ವರ್ ಅವರು, ರಾಜ್ಯ ಪ್ರವಾಸ ಸಂದರ್ಭದಲ್ಲಿ ರಾಹುಲ್ ಅವರು ರೋಡ್ ಶೋ ನಡೆಸಲಿದ್ದಾರೆ. ಫೆ.10 ರಂದು ಬಳ್ಳಾರಿಯ ಹೊಸಪೇಟೆಯಲ್ಲಿ ಪರಿಶಿಷ್ಟ ಪಂಗಡದವರಿಗಾಗಿ ರ್ಯಾಲಿ ನಡೆಸಲಿದೆ. ಫೆ.11 ರಂದು ಚಿಕ್ಕಬಳ್ಳಾಪುರದ ಗ್ರಾಮದಲ್ಲಿ ರೈತರಿಗಾಗಿ ಸಮಾವೇಶ ಹಾಗೂ ಮೈಸೂರಿನಲ್ಲಿ ವಿದ್ಯಾರ್ಥಿಗಳ ರ್ಯಾಲಿ ನಡೆಸಲಾಗುತ್ತದೆ. ಫೆ.12 ರಂದು ಬೆಂಗಳೂರಿನಲ್ಲಿ ಮೆಗಾ ರ್ಯಾಲಿ ಆಯೋಜಿಸಲಾಗಿದ್ದು, ರಾಹುಲ್ ಅವರು ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆಂದು ತಿಳಿಸಿದ್ದಾರೆ.