ಅಪಘಾತಕ್ಕೀಡಾದ ಶಾಲಾ ವಾಹನ 
ರಾಜ್ಯ

ಅಥಣಿ: ಶಾಲಾ ವಾಹನ-ಬೈಕ್ ನಡುವೆ ಭೀಕರ ಅಪಘಾತ, 3 ಬೈಕ್ ಸವಾರರು ಸಾವು

ಶಾಲಾ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ಅಥಣಿ: ಶಾಲಾ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖೋತನಟ್ಟಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು ಶಾಲಾ ವಾಹನದಲ್ಲಿದ್ದ 20ಕ್ಕೂ ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಗಾಯಗಳಾಗಿದೆ.
ಅಥಣಿಯ ಯಲ್ಲಡಗಿ ಗ್ರಾಮದ ನಿವಾಸಿಗಳಾದ ಮನೋಜ್ ದೊಡ್ಡಮನಿ (32), ದಾನಪ್ಪ ಮಗದುಮ್ (45) ಹಾಗೂ ಅಪ್ಪಾಸಾಬ್ ಮರಾಠೆ ಮೃತಪಟ್ಟ ದುರ್ದೈವಿಗಳು. ಇವರಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಬೈಕ್‌  ಸವಾರ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದ ನಡುವೆ ಅಸುನೀಗಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿದ್ದ ಶಾಲಾ ವಿದ್ಯಾರ್ಥಿಗಳನ್ನು  ಅಥಣಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲಾ ವಾಹನದಲ್ಲಿದ್ದ ವಿದ್ಯಾರ್ಥಿಗಳು ಐಗಳಿ ಕ್ರಾಸ್ ಮಾಣಿಕ ಪ್ರಭು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರೆಂದು ತಿಳಿದು ಬಂದಿದ್ದು ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT