ಕೇಂದ್ರ ಸಚಿವ ಸದಾನಂದ ಗೌಡ 
ರಾಜ್ಯ

ರಾಷ್ಟ್ರೀಯ ಅಂಕಿ-ಅಂಶ ಕೋಶ ಸದ್ಯದಲ್ಲಿಯೇ ಆರಂಭ: ಕೇಂದ್ರ ಸಚಿವ ಸದಾನಂದ ಗೌಡ

ವಿವಿಧ ಇಲಾಖೆಗಳ ಅಂಕಿ-ಅಂಶ ಸಂಗ್ರಹಿಸಿಡಬಲ್ಲ ರಾಷ್ಟ್ರೀಯ ಅಂಕಿ-ಅಂಶ ಕೋಶವನ್ನು ಸದ್ಯದಲ್ಲಿಯೇ ಆರಂಭಿಸಲಾಗುವುದು ...

ಬೆಂಗಳೂರು: ವಿವಿಧ ಇಲಾಖೆಗಳ ಅಂಕಿ-ಅಂಶ ಸಂಗ್ರಹಿಸಿಡಬಲ್ಲ ರಾಷ್ಟ್ರೀಯ ಅಂಕಿ-ಅಂಶ ಕೋಶವನ್ನು ಸದ್ಯದಲ್ಲಿಯೇ ಆರಂಭಿಸಲಾಗುವುದು ಎಂದು ಕೇಂದ್ರ ಅಂಕಿ-ಅಂಶ ಮತ್ತು ಯೋಜನಾ ಅನುಷ್ಠಾನ ಖಾತೆ ಸಚಿವ ಸದಾನಂದ ಗೌಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಆಯೋಜಿಸಲಾಗಿದ್ದ 25ನೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಂಕಿ-ಅಂಶ ಸಂಘಟನೆಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನೀತಿ ನಿರೂಪಕರಿಗೆ ಉಪಯುಕ್ತ ದಾಖಲಾತಿಗಳನ್ನು ಸೂಕ್ತ ಸಮಯಕ್ಕೆ ಒದಗಿಸಲು ಈ ಕೋಶ ನೆರವಾಗಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಅಂಕಿ-ಅಂಶ ಖಾತೆ ಸಚಿವ ಎಂ.ಆರ್. ಸೀತಾರಾಮ್, ಅಗತ್ಯ ಅಂಕಿ-ಅಂಶ ಲಭ್ಯವಾದ ಕಾರಣ ವಿವಿಧ ಇಲಾಖೆಗಳಲ್ಲಿ ಬಳಸಲಾಗದ ಅನುದಾನವನ್ನು ಕ್ರೋಡೀಕರಿಸಿ, ಅಭಿವೃದ್ಧಿ ಕಾರ್ಯಗಳಿಗೆ ಬಳಸಲು ಸಾಧ್ಯವಾಯಿತು, ಈ ಹಣದಲ್ಲಿ 4 ಸಾವಿರ ಶಾಲಾ-ಕೊಠಡಿಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೇಂದ್ರದ ಅಂಕಿ ಅಂಶ ಖಾತೆ ರಾಜ್ಯ ಸಚಿವ ವಿಜಯ್ ಗೋಯಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT