ಬೆಳ್ಳಂದೂರು ಕೆರೆ ಅಂಗಳದಲ್ಲಿ ಅಗ್ನಿ ನರ್ತನ: 
ರಾಜ್ಯ

ಬೆಳ್ಳಂದೂರು ಕೆರೆ ಅಂಗಳದಲ್ಲಿ ಅಗ್ನಿ ನರ್ತನ: ಬೆಂಕಿ ನಂದಿಸಲು ಹರಸಾಹಸ

ಬೆಳ್ಳಂದೂರು ಕೆರೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಗ್ನಿ ನರ್ತನ ಮುಂದುವರೆದಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ...

ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಗ್ನಿ ನರ್ತನ ಮುಂದುವರೆದಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. 
ಇಬ್ಬಲೂರು ಮತ್ತು ಈಜಿಪುರ ಕಡೆಯ ಕೆರೆ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಕಾಡ್ಗಿಚ್ಚಿನಂತೆ ಬೆಂಕಿಯ ಜ್ವಾಲೆ ಸೇನಾ ಕ್ಯಾಂಪಿಗೂ ಆವರಿಸಿದ್ದು, ಸ್ಥಳೀಯ ನಿವಾಸಿಗಳಲ್ಲಿ ಸಾಕಷ್ಟು ಆಂತಕಕ್ಕೆ ಎಡೆ ಮಾಡಿಕೊಟ್ಟಿದೆ. 
ನಿನ್ನೆ ಬೆಳಿಕ್ಕೆ 10 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಸಾಕಷ್ಟು ಹರಸಾಹಸದೊಂದಿಗೆ ಬಿಡಿಎ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು 11 ಗಂಟೆಗೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದರು. ಬಳಿಕ ಮಧ್ಯಾಹ್ನ 12.30 ಗಂಟೆ ಸುಮಾರಿಗೆ ಮತ್ತೊಮ್ಮೆ ಬೆಂಕಿ ಕಾಣಿಸಿಕೊಂಡಿತು.ಈಗಲೂ ಸ್ಥಳದಲ್ಲಿ ಬೆಂಕಿ ತಾಂಡವವಾಡುತ್ತಿದ್ದು, ಘಟನೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಬಿಡಿಎ ಅಧಿಕಾರಿಘಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. 
ಪ್ರಸ್ತುತ ಬೆಂಕಿ ಹೊತ್ತಿಕೊಂಡಿರುವ ಸ್ಥಳವು ನೀರು ಮತ್ತು ಜೊಂಡಿನಿಂದ ಆವೃತವಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಬೋಟ್ ಮುಖಾಂತರ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಮಾಡುತ್ತಿದ್ದಾರೆ. 5 ಸಾವಿರಕ್ಕೂ ಹೆಚ್ಚು ಸೇನಾ ಸಿಬ್ಬಂದಿಗಳು ರಾತ್ರಿಯಿಂದಲೂ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. 
ಬೆಂಕಿಯ ಜ್ವಾಲೆಯು ಕೆರೆಯ ಅಕ್ಕಪಕ್ಕದಲ್ಲಿರುವ ಸೇನಾ ಪ್ರದೇಶಕ್ಕೆ ಆವರಿಸುತ್ತಿದ್ದಂತೆಯೇ 5 ಸಾವಿರಕ್ಕೂ ಹೆಚ್ಚು ಸೇನಾ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಆರಂಭಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಕೆರೆಯ ವಿವಿಧ ಭಾಗಗಳಲ್ಲಿ ಬೆಂಕಿ ತಾಂಡವವಾಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತೆವಹಿಸಿರುವ ಬಿಡಿಎ ಅಧಿಕಾರಿಗಳು ಕೆರೆ ಸುತ್ತ ಜನರು ಸುಳಿಯದಂತೆ ಸುತ್ತೋಲೆಯನ್ನು ಹೊರಡಿಸಿದೆ ಎಂದು ತಿಳಿದುಬಂದಿದೆ. 
ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಹತ್ತಿಕೊಂಡಿರುವುದು ಇದು ಮೊದಲೇನಲ್ಲ. 2016 ಆಗಸ್ಟ್ 12 ಹಾಗೂ 2017ರ ಫೆಬ್ರವರಿ ತಿಂಗಳಿನಲ್ಲಿಯೂ ಕೆರೆಯಲ್ಲಿನ ನೊರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುವ ಜೊತೆಗೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿತ್ತು. ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಿದ್ದ ಎನ್'ಜಿಟಿ ಸ್ಥಳೀಯ ಪ್ರಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಕೆರೆ ಸ್ವಚ್ಛತೆಗೊಳಿಸುವಂತೆ ಆದೇಶ ನೀಡಿತ್ತು. ನಂತರದ ಕೆಲವು ದಿನಗಳ ಕಾಲ ಕಾರ್ಖಾನೆಗಳು ಸ್ತಬ್ದಗೊಂಡಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ