ಸಿದ್ದರಾಮಯ್ಯ 
ರಾಜ್ಯ

ಮೈಸೂರು ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಯನ್ನು ತಾವು ನಿರಾಕರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ...

ಬೆಂಗಳೂರು: ಮೈಸೂರು ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಯನ್ನು ತಾವು ನಿರಾಕರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. 
ಮೈಸೂರು ವಿವಿ ತಮಗೆ ಗೌರವ ಡಾಕ್ಟರೇಟ್ ನೀಡಲು ಮುಂದಾಗಿದೆ ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನಾನು ಯಾವುದೇ ಪಿಎಚ್ ಡಿ ಮಾಡಿಲ್ಲ. ಹೀಗಾಗಿ ನನಗೆ ಗೌರವ ಡಾಕ್ಟರೇಟ್ ಬೇಡ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.
ನಿನ್ನೆಯಷ್ಟೆ 2018ನೇ ಸಾಲಿನ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್ ನೀಡುವಂತೆ ವಿವಿಯ ಸಿಂಡಿಕೇಟ್ ಸದಸ್ಯ ಎಂಎಸ್‍ಎಸ್ ಕುಮಾರ್ ಅವರು ವಿವಿ ಕುಲಪತಿಗೆ ಮನವಿ ಮಾಡಿರುವುದಾಗಿ ಹೇಳಿದ್ದರು. 
ಸಮಾಜದಲ್ಲಿ ಗಣ್ಯವ್ಯಕ್ತಿಗಳಿಗೆ ನೀಡುವ ಗೌರವ ಡಾಕ್ಟರೇಟ್ ಪದವಿಗೆ ಸಿದ್ದರಾಮಯ್ಯ ಅವರು ಅರ್ಹರಿದ್ದಾರೆ. ಅವರು ಇದೇ ವಿವಿಯಲ್ಲಿ ಪದವಿ ಕೂಡ ಪಡೆದಿದ್ದಾರೆ. ಮೈಸೂರಿನಿಂದ ಹೋಗಿ ರಾಜ್ಯದ ಚುಕ್ಕಾಣಿ ಹಿಡಿದು ಉತ್ತಮ ಆಡಳಿತ ನಡೆಸಿದ್ದಾರೆ. ಇಂಥವರಿಗೆ ಡಾಕ್ಟರೇಟ್ ನೀಡಿದರೆ ಮೈಸೂರು ವಿವಿಯ ಘನತೆ ಹೆಚ್ಚಲಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯನವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ನೀಡುವಂತೆ ಶಿಫಾರಸು ಮಾಡುತ್ತಿದ್ದೇನೆ ಎಂದು ಸಿಂಡಿಕೇಟ್ ಸದಸ್ಯ ಕುಮಾರ್ ಪತ್ರದಲ್ಲಿ ವಿವರಿಸಿದ್ದರು.
ಇದರ ಜೊತೆಗೆ ಇತರೆ ಸಿಂಡಿಕೇಟ್ ಸದಸ್ಯರು ಸುತ್ತೂರು ಶ್ರೀ, ಸಾಲು ಮರದ ತಿಮ್ಮಕ್ಕ, ಇಸ್ರೋ ಅಧ್ಯಕ್ಷ ಕಿರಣ್‍ಕುಮಾರ್ ಅವರಿಗೆ ಕೂಡ ಗೌರವ ಡಾಕ್ಟರೇಟ್ ನೀಡುವಂತೆ ಶಿಫಾರಸು ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT